ಮಹಾರಾಷ್ಟ್ರ ಪಾಲಿಕೆ ಚುನಾವಣೆಯಲ್ಲಿ ಗೌರಿ ಹತ್ಯೆ ಆರೋಪಿ ಗೆಲುವು

ಬಸವ ಮೀಡಿಯಾ
ಬಸವ ಮೀಡಿಯಾ

ಜಾಲ್ನಾ

ಗೌರಿ ಲಂಕೇಶ್‌ ಕೊಲೆ ಪ್ರಕರಣದ ಆರೋಪಿ ಶ್ರೀಕಾಂತ್‌ ಪಾಂಗಾರಕರ್ ಜಾಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆದ್ದಿದ್ದಾರೆ.

ವಾರ್ಡ್ ನಂ.13ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪಾಂಗಾರಕರ್ ಎದುರು ಬಿಜೆಪಿ ಅಭ್ಯರ್ಥಿ ರಾವಸಾಹೇಬ್ ಧೋಬ್ಲೆ 2,761 ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ.

ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಈ ವಾರ್ಡ್‌ನಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ.

ಗುರುವಾರ ನಡೆದಿದ್ದ ರಾಜ್ಯದ ಮುನ್ಸಿಪಲ್ ಚುನಾವಣೆಗಳ ಫಲಿತಾಂಶಗಳನ್ನು ಶುಕ್ರವಾರ ಪ್ರಕಟಿಸಲಾಯಿತು.

ಹಿರಿಯ ಪತ್ರಕರ್ತೆ ಗೌರಿ ಲಂಕೇಶರನ್ನು 2017, ಸೆ.5ರಂದು ಬೆಂಗಳೂರಿನ ಅವರ ಮನೆಯ ಸಮೀಪ ಗುಂಡಿಟ್ಟು ಹತ್ಯೆ ಮಾಡಲಾಗಿತ್ತು.

ಪ್ರಕರಣದಲ್ಲಿ ಆರೋಪಿಯಾಗಿ ಹಿಂದು ಜನಜಾಗ್ರತಿ ಸಮಿತಿಯ ಪಾಂಗಾರಕರ್ ಹೆಸರನ್ನು ನಂತರ ಸೇರಿಸಲಾಗಿದ್ದು, 2024,ಸೆ.4ರಂದು ಕರ್ನಾಟಕ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು.

ಗೌರಿ ಲಂಕೇಶ್‌ ಕೊಲೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ ಪಾಂಗಾರಕರ್ ಗೆಲುವು ಸಾಧಿಸಿದ್ದಾರೆ.

2018ರ ಆಗಸ್ಟ್‌ನಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕಚ್ಚಾ ಬಾಂಬ್‌ಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡ ಬಳಿಕ ಮಹಾರಾಷ್ಟ್ರ ಭಯೋತ್ಪಾದನೆ ನಿಗ್ರಹ ದಳವು ಸ್ಫೋಟಕಗಳ ಕಾಯ್ದೆ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಪಾಂಗಾರಕರ್‌ನನ್ನು ಬಂಧಿಸಿತ್ತು.

ಪಾಂಗಾರಕರ್ 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮುನ್ನ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಯನ್ನು ಸೇರಿದ್ದರು. ಆಗ ವ್ಯಾಪಕ ಟೀಕೆಗಳ ಬಳಿಕ ಶಿಂಧೆ ಅದನ್ನು ತಡೆಹಿಡಿದಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/FoRS2gZkHkaEzqaRtWk0ZP

Share This Article
Leave a comment

Leave a Reply

Your email address will not be published. Required fields are marked *