ವಿಜಯಪುರ
ಐತಿಹಾಸಿಕ ಮಮದಾಪುರ ಕೆರೆ ಹಾಗೂ ಅಲ್ಲಿರುವ ೧೫೦೦ ಎಕರೆ ಅರಣ್ಯ ಪ್ರದೇಶವನ್ನು ಅಭಿವೃದ್ಧಿಪಡಿಸಿ ಪ್ರಕೃತಿ ಪ್ರೇಮಿ ಸಿದ್ದೇಶ್ವರ ಶ್ರೀಗಳಿಗೆ ಅರ್ಪಣೆ ಮಾಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಎಂ.ಬಿ.ಪಾಟೀಲ ಸೋಮವಾರ ಹೇಳಿದರು.
ಗೋಲ್ಡ್ ಪ್ಲಸ್ ಕಂಪನಿ 50 ಲಕ್ಷ ನೀಡಿದ್ದು, ಡ್ರಿಪ್ ಮೂಲಕ ನೀರು ಒದಗಿಸಲಾಗುತ್ತಿದೆ ಎಂದು ಹೇಳಿದರು ಎಂದು ಕನ್ನಡಪ್ರಭ ವರದಿ ಮಾಡಿದೆ.
ಮಮದಾಪುರ ಕೆರೆ ಪುನರುಜ್ಜಿವನ ಕಾಮಗಾರಿಗೆ ಭೂಮಿಪೂಜೆ ಹಾಗೂ ಸ್ಟಾರ್ಟ್ ಕ್ಲಾಸ್‌ಗಳನ್ನು ಉದ್ಘಾಟಿಸಿ ಮಾತನಾಡಿದ ಅವರು ಮಮದಾಪುರ ಅರಣ್ಯ ಪ್ರದೇಶ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಅವಶ್ಯವಿದ್ದಲ್ಲಿ ಸಿಎಸ್‌ಆರ್ ಅನುದಾನ ಪಡೆಯಲಾಗುವುದೆಂದು ಹೇಳಿದರು. ಇಲ್ಲಿ ಸೈನ್ಸ್ ಮ್ಯೂಸಿಯಂ, ಮಕ್ಕಳ ಚಟುವಟಿಕೆಗಾಗಿ ಪ್ರತ್ಯೇಕ ತಾಣ ಸೇರಿ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.
ವಿರಕ್ತಮಠದ ಅಭಿನವ ಮುರುಘಂದ್ರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.