ಜಯಪುರ
‘2ಎ ಮೀಸಲಾತಿ ಹೋರಾಟವು ಯಾವುದೇ ಪಕ್ಷ, ಸಂಘಟನೆ, ವ್ಯಕ್ತಿ ಪ್ರೇರಿತ ಹೋರಾಟವಲ್ಲ, ಇದು ಲಿಂಗಾಯತ ಪಂಚಮಸಾಲಿ ಸಮುದಾಯ ಪ್ರೇರಿತ ಹೋರಾಟವಾಗಿದೆ’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
‘2 ಎ ಮೀಸಲಾತಿ ಹೋರಾಟವು ಆರ್‌ಎಸ್‌ಎಸ್, ಸಂಘ ಪರಿವಾರ ಪ್ರೇರಿತ ಹೋರಾಟ’ ಎಂಬ ಆರೋಪ ಕುರಿತು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದರು.
‘ಬಿಜೆಪಿ ಸರ್ಕಾರದ ಅವಧಿಯಲ್ಲಿ ನಮ್ಮ ಹೋರಾಟವನ್ನು ಕಾಂಗ್ರೆಸ್ ಪ್ರೇರಿತ ಹೋರಾಟ ಎಂದು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಿಜೆಪಿ ಪ್ರೇರಿತ ಹೋರಾಟ ಎಂದು ಬಿಂಬಿಸುವ ಮೂಲಕ ಮೀಸಲಾತಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಯಿತು’ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪಂಚಮಸಾಲಿ ಸಮಾಜದ ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎಂ.ಪಾಟೀಲ ದೇವರ ಹಿಪ್ಪರಗಿ, ಶ್ರೀಶೈಲ ಬುಕ್ಕಣ್ಣಿ, ದಾನೇಶ ಅವಟಿ, ಜಿ.ಬಿ.ಕೋಳೂರ, ಬಾಪುಗೌಡ ಪಾಟೀಲ, ಶರಣಬಸಪ್ಪ ಗಂಗಶೆಟ್ಟಿ, ಸಿದ್ದು ಹಳ್ಳೂರ ಉಪಸ್ಥಿತರಿದ್ದರು.