ಸಾಣೇಹಳ್ಳಿಯಲ್ಲಿ ನವೆಂಬರ್ ನಾಲ್ಕರಿಂದ 9ರವರೆಗೆ ಆರು ದಿನಗಳ ಕಾಲ ರಾಷ್ಟ್ರೀಯ ನಾಟಕೋತ್ಸವ ನಡೆಯುತ್ತಿದೆ.
ಈ ಬಾರಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ‘ಕೋಳೂರು ಕೊಡಗೂಸು’, ಬಿ.ಆರ್. ಪೊಲೀಸಪಾಟೀಲ ಅವರ ‘ತುಲಾಭಾರ’ ಹಾಗೂ ಟಿ.ಕೆ.ರಾಮರಾವ್ ಕಾದಂಬರಿ ಆಧರಿಸಿದ ಗಣೇಶ ಅಮೀನಗಡ ಅವರ ರಂಗರೂಪ ‘ಬಂಗಾರದ ಮನುಷ್ಯ’ ನಾಟಕಗಳು ರಾತ್ರಿ ಒಂಬತ್ತು ಗಂಟೆಗೆ ಬಯಲು ರಂಗಮಂದಿರದಲ್ಲಿ ಪ್ರದರ್ಶನಗೊಳ್ಳುತ್ತಿವೆ.
ಶ್ರೀ ಶಿವಕುಮಾರ ಬಯಲು ರಂಗಮಂದಿರದಲ್ಲಿ ಮುಖ್ಯ ವೇದಿಕೆ ಕಾರ್ಯಕ್ರಮ ಮತ್ತು ನಾಟಕಗಳ ಪ್ರದರ್ಶನ ನಡೆಯುತ್ತಿದೆ. ಎಸ್.ಎಸ್. ಒಳಾಂಗಣ ರಂಗಮಂದಿರದಲ್ಲಿ ಮಧ್ಯಾಹ್ನದ ನಾಟಕ ಪ್ರದರ್ಶನಗಳು ಮತ್ತು ಮುಖ್ಯವಿಚಾರ ಸಂಕಿರಣದ ಕಾರ್ಯಕ್ರಮಗಳು ನಡೆಯಲಿವೆ.
ಕೇವಲ ವಚನ ಸಂಸ್ಕೃತಿ ಬಿಂಬಿಸುವ ನಾಟಕಗಳಲ್ಲದೆ ಬದುಕಿನ ವಿವಿಧ ಮಗ್ಗಲುಗಳನ್ನು ತೋರಿಸುವ ನಾಟಕಗಳು ಇಲ್ಲಿ ಪ್ರದರ್ಶನಗೊಳ್ಳುತ್ತಿರುವುದು ಗಮನಾರ್ಹ.