ವಿಶ್ವ ಹಿಂದೂ ಪರಿಷತ್ತಿನ ಸಂತ ಸಮಾವೇಶದಲ್ಲಿ ವಚನಾನಂದ ಶ್ರೀ ಭಾಗಿ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಶನಿವಾರ ನಡೆದ ವಿಶ್ವ ಹಿಂದೂ ಪರಿಷತ್ತಿನ ಸಂತ ಸಮಾವೇಶದಲ್ಲಿ ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಭಾಗಿಯಾಗಿದ್ದರು.

ಸಮಾವೇಶದಲ್ಲಿ ಭಾಗವಹಿಸಿ ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ನೀಡಿದ ನಿಯೋಗದಲ್ಲಿಯೂ ಹಾಜರಿದ್ದ ಚಿತ್ರಗಳನ್ನು ತಮ್ಮ ಸಾಮಾಜಿಕ ಜಾಲತಾಣದ ಪುಟಗಳಲ್ಲಿ ಹಂಚಿಕೊಂಡಿದ್ದಾರೆ.

ಸಮಾವೇಶದಲ್ಲಿ ಮಂಗಳೂರಿನ ವಜ್ರದೇಹಿ ಮಠದ ಶ್ರೀಗಳು, ಶಿವಮೊಗ್ಗದ ಕೂಡಲಿ ಶೃಂಗೇರಿ ಮಠದ ಶ್ರೀಗಳು, ಬಳ್ಳಾರಿ ಕಲ್ಯಾಣ ಮಠದ ಶ್ರೀಗಳು ಸೇರಿ ಸುಮಾರು 25ಕ್ಕೂ ಹೆಚ್ಚು ಮಠಾಧೀಶರು ಸಂತ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಸಂತ ಸಮಾವೇಶ ವಕ್ಫ್ ವಿವಾದದ ಬಗ್ಗೆ ಹಲವಾರು ನಿರ್ಣಯಗಳನ್ನು ತೆಗೆದುಕೊಂಡಿದ್ದರೂ
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ನೀಡಿದ ‘ನಮ್ಮನ್ನು ಗೌರವಿಸುವ ಸಂವಿಧಾನ ಬರಬೇಕು’ ಹೇಳಿಕೆ ಎಲ್ಲರ ಗಮನ ಸೆಳೆಯಿತು.

ಸ್ವಾತಂತ್ರ್ಯಪೂರ್ವದಲ್ಲಿ ಭಾರತವು ಹಿಂದೂರಾಷ್ಟ್ರವಾಗಿತ್ತು. ಸ್ವಾತಂತ್ರ್ಯ ಬಂದ ನಂತರ ಜಾತ್ಯತೀತ ರಾಷ್ಟ್ರವಾಯಿತು. ಹಿಂದೂಗಳು ನಾವೆಲ್ಲರೂ ಸುಭದ್ರರಾಗಿ ಇದ್ದೇವೆ ಎಂಬ ಭ್ರಮೆಯಲ್ಲಿದ್ದಾರೆ. ಆದರೆ ಈ ದೇಶವನ್ನು ಕಬಳಿಸುವ ಕೆಲಸ ವ್ಯವಸ್ಥಿತವಾಗಿ ನಡೆಯುತ್ತಿದೆ. ಹಿಂದೂ ಧರ್ಮ ಮತ್ತು ಹಿಂದೂಗಳನ್ನು ಗೌರವಿಸುವ ಪಕ್ಷವನ್ನು ಅಧಿಕಾರಕ್ಕೆ ತರಬೇಕು, ಎಂದು ಶ್ರೀಗಳು ಹೇಳಿದರೆಂದು ಮಾಧ್ಯಮಗಳು ವರದಿ ಮಾಡಿವೆ.

Share This Article
1 Comment

Leave a Reply

Your email address will not be published. Required fields are marked *