ಭಾಲ್ಕಿ
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ದೆಹಲಿಯಲ್ಲಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿಯವರನ್ನು ಬುಧವಾರ ಭೇಟಿಯಾಗಿ ಜನ್ಮದಿನದ ಶುಭಾಶಯ ಕೋರಿದರು.
ಜೊತೆಗೆ ಡಿಸೆಂಬರ್22ರಂದು ಪಟ್ಟಣದಲ್ಲಿ ನಡೆಯಲಿರುವ ಶತಾಯುಷಿ ಡಾ.ಚನ್ನಬಸವ ಪಟ್ಟದ್ದೇವರ 135ನೆಯ ಜಯಂತ್ಯುತ್ಸವ ಸಮಾರಂಭಕ್ಕೆ ಅವರನ್ನು ಆಹ್ವಾನಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ, ವೈಜಿನಾಥ ಬಿರಾದಾರ್ ಜತೆಗಿದ್ದರು.