ಸಂಘ ಪರಿವಾರದ ಭಾರತೀಯ ಸಂಸ್ಕೃತಿ ಉತ್ಸವಕ್ಕೆ ಹೋಗುತ್ತಿಲ್ಲ: ಸಿದ್ದರಾಮಯ್ಯ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

ಮುಂದಿನ ತಿಂಗಳು ಸೇಡಂನಲ್ಲಿ ನಡೆಯುತ್ತಿರುವ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ಪಾಲ್ಗೊಳ್ಳುತ್ತಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಘ ಪರಿವಾರದ ಕೆ.ಎನ್ ಗೋವಿಂದಾಚಾರ್ಯ ಅವರು ಸ್ಥಾಪಿಸಿರುವ ಭಾರತ ವಿಕಾಸ ಸಂಗಮ ಕಾರ್ಯಕ್ರಮವನ್ನು ಆಯೋಜಿಸಿದೆ. ಆ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿಯೊಂದಿಗೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅವರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ ಎಂಬದು ಸಾಕಷ್ಟು ವಿರೋಧ, ಆಕ್ಷೇಪ, ಪ್ರಶ್ನೆಗಳನ್ನು ಹುಟ್ಟುಹಾಕಿತ್ತು. ಈ ಬಗ್ಗೆ ಸಿದ್ದರಾಮಯ್ಯ ಇಂದು ‘ಎಕ್ಸ್‌’ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

“ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ. ಈ ಬಗ್ಗೆ ನನಗೆ ಅಧಿಕೃತ ಆಹ್ವಾನ ಬಂದಿಲ್ಲ. ಈ ಕಾರ್ಯಕ್ರಮವನ್ನು ಆಯೋಜಿಸಿರುವ ಸಂಸ್ಥೆಯ ಹಿನ್ನೆಲೆಯ ವಿವರವನ್ನು ತರಿಸಿ ಪರಿಶೀಲಿಸಿದ ನಂತರ ಅದರಲ್ಲಿ ಭಾಗವಹಿಸದೆ ಇರಲು ತೀರ್ಮಾನಿಸಿದ್ದೇನೆ,” ಎಂದು ಹೇಳಿದ್ದಾರೆ.

Share This Article
1 Comment
  • I welcome the decision of CM Siddaramaiah for his stand to not to participate in BPS’ RSS conference. Mr. Priyaka Khrge should also declare not attending the Basavaraj Patil Sedam’ conference. We should remember that this MAN Basavaraj patil Sedam opposed 371J in Parliament as Rajya Sabha member. He wants to make Kalyaan Karnataka region as a region of HANUMANADU. Instead of BASAVANADU. We oppose Sedam’ RSS work.

Leave a Reply

Your email address will not be published. Required fields are marked *