ಬೆಳಗಾವಿ
ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣಸೌಧದ ಮೊದಲ ಮಹಡಿಯಲ್ಲಿ ಅನುಭವ ಮಂಟಪದ ತೈಲ ಕಲಾಕೃತಿಯನ್ನು ಲೋಕಾರ್ಪಣೆಗೊಳಿಸಿದರು.
ಕ್ಯಾನ್ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರ ಇದಾಗಿದೆ. ಬೆಂಗಳೂರು ಚಿತ್ರಕಲಾ ಪರಿಷತ್ನ ಕಲಾವಿದ ಸತೀಶ್ ರಾವ್, ಶಿವಮೊಗ್ಗದ ಶ್ರೀಕಾಂತ್ ಹೆಗಡೆ ಸಿದ್ದಾಪುರ, ಶೇಷಾದ್ರಿಪುರಂ ಕೆನ್ ಸ್ಕೂಲ್ ಕಲಾಶಾಲೆಯ ಅಶೋಕ್ ಯು. ಜಗಳೂರು, ರಾಜಾ ರವಿವರ್ಮ ಕಲಾಶಾಲೆಯ ರೂಪಾ ಎಂ. ಆರ್. ವೀರಣ್ಣ ಮಡಿವಾಳಪ್ಪ ಬಲ್ಲಿ, ಬೈಲಹೊಂಗಲ ಮತ್ತು ಶ್ರೀ ಮಹೇಶ ನಿಂಗಪ್ಪ ಹಾಗೂ ಜಮಖಂಡಿಯ ದಫಲಾಪುರ ಅವರ ಕುಂಚದಲ್ಲಿ ಮೂಡಿಬಂದಿದೆ.