ಮಂಡ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮತ್ತು ಅವರ ದಿವ್ಯಸಾನಿಧ್ಯದಲ್ಲಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ.ಗೊ.ರು.ಚನ್ನಬಸಪ್ಪ, ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ.ಚಂದ್ರಶೇಖರ್ ಕಂಬಾರ, ನಿಕಟಪೂರ್ವ ಸಮ್ಮೇಳನಾಧ್ಯಕ್ಷರಾದ ಡಾ.ದೊಡ್ಡರಂಗೇಗೌಡ, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ, ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಪಿ.ರವಿಕುಮಾರ್ ಗಣಿಗ, ಎ.ಬಿ.ರಮೇಶ ಬಂಡಿಸಿದ್ದೇಗೌಡ, ಹೆಚ್.ಟಿ.ಮಂಜು, ಕೆ.ಎಂ.ಉದಯ, ದರ್ಶನ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ ಇತರರು ಉಪಸ್ಥಿತರಿದ್ದರು.

