ಅಸಮಾನತೆಯ ಪ್ರತೀಕವಾದ ಮನುಸ್ಮೃತಿ ಗ್ರಂಥವನ್ನು ಡಾ.ಬಿ.ಆರ್.ಅಂಬೇಡ್ಕರ್ ಸುಟ್ಟ ಐತಿಹಾಸಿಕ ದಿನವಾದ ಡಿಸೆಂಬರ್ 25ರಂದು ದಲಿತ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಮನುಸ್ಮೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ವಿರುದ್ಧ ಕೂಡ ದಲಿತ ಸಂಘಟನೆಗಳು ಪ್ರತಿಭಟಿಸಿದವು.