ಕಲಬುರಗಿ
ಸುಭಾಶ್ಚಂದ್ರ ಪಾಟೀಲ ಸ್ಮಾರಕ ಜನಕಲ್ಯಾಣ ಟ್ರಸ್ಟ್ ವತಿಯಿಂದ ನಾಡಿನ ಹಿರಿಯ ಸಾಹಿತಿ ಪ್ರೊ.ಜಿ.ಎಸ್.ಸಿದ್ಧಲಿಂಗಯ್ಯ ಅವರಿಗೆ 2025ನೇ ಸಾಲಿನ “ಬಸವ ಪ್ರಶಸ್ತಿ” ನೀಡಿ ಗೌರವಿಸಲಾಗುತ್ತಿದೆ.
ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‍ನಲ್ಲಿ ಜ.11 ರಂದು ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಶರಣಗೌಡ ಪಾಟೀಲ ಪಾಳಾ ಮತ್ತು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್.ಮಾಲಿಪಾಟೀಲ ತಿಳಿಸಿದ್ದಾರೆ.
ಪ್ರಶಸ್ತಿಯು 51 ಸಾವಿರ ರೂ.ನಗದು, ಪ್ರಶಸ್ತಿ ಪತ್ರ ಮತ್ತು ಫಲಕವನ್ನು ಒಳಗೊಂಡಿದೆ ಎಂದು ಅವರು ತಿಳಿಸಿದ್ದಾರೆ.