ಪುತ್ಥಳಿ ವಿರೂಪ: ಬೀದರಿನಲ್ಲಿ ಬಸವಪರ ಸಂಘಟನೆಗಳಿಂದ ಪ್ರತಿಭಟನೆ

ಬಸವ ಮೀಡಿಯಾ
ಬಸವ ಮೀಡಿಯಾ

ಬೀದರ್

ನಗರದ ಬಸವಪರ ಸಂಘಟನೆಗಳು ಬಸವೇಶ್ವರ ವೃತ್ತದಿಂದ ಮೆರವಣಿಗೆ ಹೊರಟು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.

ಈ ಕೃತ್ಯದಲ್ಲಿ ತೊಡಗಿರುವ ಆರೋಪಿಗಳನ್ನು ಪತ್ತೆ ಹಚ್ಚಿ, ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂಥ ಕೃತ್ಯಗಳು ಪುನಃ ನಡೆಯದಂತೆ ಭದ್ರತಾ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

‘ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಪುತ್ಥಳಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿರುವುದು ಖಂಡನಾರ್ಹ. ಈ ಕೃತ್ಯ ನಾಡಿನ ಸಾಂಸ್ಕೃತಿಕ ಹಾಗೂ ಧಾರ್ಮಿಕ ಮೌಲ್ಯಗಳಿಗೆ ಧಕ್ಕೆ ಮಾಡಿದೆ. ಸಮಾಜದ ಭಾವನೆಗಳಿಗೆ ಧಕ್ಕೆಯಾಗಿದೆ’ ಎಂದು ತಿಳಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾದ ಕೇಂದ್ರ ಸಮಿತಿ ಉಪಾಧ್ಯಕ್ಷ ಬಸವರಾಜ ಧನ್ನೂರ, ಬಸವ ಸೇವಾ ಪ್ರತಿಷ್ಠಾನದ ಗಂಗಾಂಬಿಕೆ ಅಕ್ಕ, ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ, ಭಾರತೀಯ ಬಸವ ಬಳಗದ ರಾಜ್ಯ ಅಧ್ಯಕ್ಷ ಬಾಬುವಾಲಿ, ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಶರಣಪ್ಪ ಮಿಠಾರೆ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ, ಯುವ ಬಸವ ದಳದ ಜಿಲ್ಲಾಧ್ಯಕ್ಷ ಗಣೇಶ ಬಿರಾದಾರ, ಯುವ ಬಸವ ಕೇಂದ್ರದ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಶಕುಂತಲಾ ಬೆಲ್ದಾಳೆ, ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಬಸವರಾಜ ಭತಮುರ್ಗೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

Share This Article
Leave a comment

Leave a Reply

Your email address will not be published. Required fields are marked *