ಬೆಳಗಾವಿ

ನಾಡಿನ ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್ ವಿಷಯಗಳಲ್ಲಿ ಉತ್ಕೃಷ್ಟ ಗುಣಮಟ್ಟದ ತರಬೇತಿ ನೀಡಲು ದೇಶದಲ್ಲಿಯೇ ಪ್ರಥಮ ಬಾರಿಗೆ ತರಬೇತಿ ಮತ್ತು ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲಾಗುತ್ತಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.
ನಾಗನೂರು ರುದ್ರಾಕ್ಷಿ ಮಠದ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಟ್ರಾನ್ಸ್ ಡಿಸಿಪ್ಲೇನರಿ ಲರ್ನಿಂಗ್ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಇವರ ಮಾರ್ಗದರ್ಶನದಲ್ಲಿ ಕೇಂದ್ರ ಶುರುವಾಗುತ್ತಿದೆ.
ಈ ತರಬೇತಿ ಮತ್ತು ಸಂಶೋಧನಾ ಕೇಂದ್ರದಲ್ಲಿ ರೋಬೋಟಿಕ್ಸ, ಕೃತಕ ಬುದ್ಧಿಮತ್ತೆ, ಬಾಹ್ಯಾಕಾಶ ತಂತ್ರಜ್ಞಾನ, ಪುನರ್ ಬಳಸಬಹುದಾದ ಶಕ್ತಿಯ ಮೂಲಗಳು ಸೇರಿದಂತೆ ವಿಜ್ಞಾನ ಹಾಗೂ ತಂತ್ರಜ್ಞಾನಕ್ಕೆ ಪೂರಕವಾದ ವಿಷಯಗಳ ಕುರಿತು ವಿದ್ಯಾರ್ಥಿಗಳಿಗೆ ತರಭೇತಿ ನೀಡಲಾಗುತ್ತದೆ. ಜೊತೆಗೆ ದೇಶದ ಹೆಸರಾಂತ ವಿಜ್ಞಾನಿ ಹಾಗೂ ಸಂಶೋಧಕರಿಂದ ತರಬೇತಿ ಪಡೆಯುವ ಅವಕಾಶವೂ ಇರುತ್ತದೆ ಎಂದು ಶ್ರೀಗಳು ತಿಳಿಸಿದರು.
ಆಸಕ್ತಿ ಇರುವ ವಿದ್ಯಾರ್ಥಿಗಳು ಜನವರಿ 31ರೊಳಗಾಗಿ ಉಚಿತವಾಗಿ ನೋಂದಣಿ ಮಾಡಿಕೊಳ್ಳಬಹುದು.
ಸಂಶೋಧನಾ ಕೇಂದ್ರಕ್ಕೆ ವಿದ್ಯಾರ್ಥಿಗಳ ಆಯ್ಕೆ ಮಾಡುವ ದೃಷ್ಟಿಯಿಂದ ಫೆಬ್ರವರಿ 2 ರಂದು ಸಿದ್ಧರಾಮೇಶ್ವರ ಸ್ವತಂತ್ರ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಯುವವಿಜ್ಞಾನಿ ಆಯ್ಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಆಸಕ್ತ 7 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಶ್ರೀಗಳು ತಿಳಿಸಿದ್ದಾರೆ.