ಬೆಂಗಳೂರು
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮತ್ತೆ ಗುಡುಗಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಯಡಿಯೂರಪ್ಪ ಲಿಂಗಾಯತ ನಾಯಕರೇ ಅಲ್ಲ ಎಂದು ಆರೋಪಿಸಿದ್ದಾರೆ.
ಮಂಗಳವಾರ ಖಾಸಗಿ ವಾಹಿನಿಯೊಂದರ ಜೊತೆ ಮಾತನಾಡುತ್ತಾ ಅವರು ಯಡಿಯೂರಪ್ಪ ಬಳೆಗಾರ ಶೆಟ್ಟರ ಸಮುದಾಯವರು ಲಿಂಗಾಯತರಲ್ಲ ಎಂದು ಹೇಳಿದರು.
ಬೇಕಾದರೆ ಯಡಿಯೂರಪ್ಪ ಅವರ ಹುಟ್ಟೂರು ಮಂಡ್ಯ ಜಿಲ್ಲೆಯ ಬೂಕನಕೆರೆಗೆ ಹೋಗಿ ಕೇಳಿದರೆ ನಿಜ ಏನು ಎನ್ನುವುದು ಗೊತ್ತಾಗುತ್ತೆ ಎಂದಿದ್ದಾರೆ. ಯಡಿಯೂರಪ್ಪ ಲಿಂಗಾಯತರ ಹೆಸರೇಳಿಕೊಂಡು ಬಿಜೆಪಿ ಪಕ್ಷವನ್ನ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ, ಎಂದು ಆರೋಪಿಸಿದ್ದಾರೆ.
ಯತ್ನಾಳ್ ಅವರ ವಿವಾದಿತ ಹೇಳಿಕೆಯ ವಿಡಿಯೋ ವೈರಲ್ ಆಗಿದೆ.
ವಿಡಿಯೋ ಹಂಚಿಕೊಳ್ಳುತ್ತಿರುವ ಅನೇಕರು ಯಡಿಯೂರಪ್ಪ ಮತ್ತವರ ಮಕ್ಕಳು ರಾಘವೇಂದ್ರ ಮತ್ತು ವಿಜಯೇಂದ್ರ ಕುಂಕುಮದಾರಿಗಳಾಗಿದ್ದು ಶರಣ ಸಂಪ್ರದಾಯಗಳಿಗಿಂತ ವೈದಿಕ ಸಂಪ್ರದಾಯಗಳನ್ನು ಆಚರಿಸುವುದು ಈ ಕಾರಣಕ್ಕಾಗಿಯೇ ಎಂದು ಪ್ರಶ್ನಿಸುತ್ತಿದ್ದಾರೆ.