ಭಾಲ್ಕಿ
ಪಟ್ಟಣದಲ್ಲಿ ನಡೆಯಲಿರುವ ವಚನ ಜಾತ್ರೆ-2025 ಮತ್ತು ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ಸಮಾರಂಭಕ್ಕೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲಾಗಿದೆ.
ಭಾಲ್ಕಿಯ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಅವರು
ಬೆಂಗಳೂರಿನ ರಾಜಭವನಕ್ಕೆ ಭಾನುವಾರ ಭೇಟಿ ನೀಡಿ ರಾಜ್ಯಪಾಲರನ್ನು ಭೇಟಿಯಾಗಿ ಸಮಾರಂಭದ ಆಹ್ವಾನ ಪತ್ರಿಕೆ ನೀಡಿದರು.
ಪಟ್ಟಣದಲ್ಲಿ ಏ.20 ರಿಂದ 22ರ ವರೆಗೆ ಮೂರು ದಿವಸ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ದಿವ್ಯ ಸಾನ್ನಿಧ್ಯದಲ್ಲಿ ವಚನ ಜಾತ್ರೆ-2025 ಮತ್ತು ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ನಡೆದಿವೆ.
ತಾವುಗಳು ಏ.22ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭ ಉದ್ಘಾಟಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಜತೆಗಿದ್ದರು.