ಕೂಡಲಸಂಗಮ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಾಗಲಕೋಟೆ ಜಿಲ್ಲಾಡಳಿತದ ವತಿಯಿಂದ ಕೂಡಲಸಂಗಮದಲ್ಲಿ ‘ಅನುಭವ ಮಂಟಪ – ಬಸವಾದಿ ಶರಣರ ವೈಭವ’ ಹಾಗೂ ಬಸವ ಜಯಂತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ನಿಷ್ಕಲ ಮಂಟಪದ ಪೂಜ್ಯ ನಿಜಗುಣಾನಂದ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಮುಖ್ಯಮಂತ್ರಿಗಳು ಡಾ.ಎಸ್.ಆರ್. ಗುಂಜಾಳ ಅವರಿಗೆ ಬಸವ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.


ಇದೇ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ಅವರು ವಿಶ್ವಗುರು ಬಸವಣ್ಣ ‘ಸಾಂಸ್ಕೃತಿಕ ನಾಯಕ’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ಉರಿಲಿಂಗಪೆದ್ದಿ ಮಠದ ಪೂಜ್ಯ ಜ್ಞಾನಪ್ರಕಾಶ ಸ್ವಾಮೀಜಿ, ಪೂಜ್ಯ ಗುರುಮಹಾಂತ ಸ್ವಾಮೀಜಿ, ಕೈಗಾರಿಕೆ ಸಚಿವರಾದ ಎಂ.ಬಿ. ಪಾಟೀಲ, ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪುರ, ಶಾಸಕರಾದ ವಿಜಯಾನಂದ ಕಾಶಪ್ಪನವರ, ಎಚ್.ವೈ. ಪಾಟೀಲ, ಜೆ.ಟಿ. ಪಾಟೀಲ, ಸಿ.ಎಸ್. ನಾಡಗೌಡ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಸಾಹಿತಿಗಳಾದ ರಂಜಾನ್ ದರ್ಗಾ, ಡಾ. ಬಿ.ಟಿ. ಲಲಿತಾನಾಯಕ, ಡಾ. ಮೀನಾಕ್ಷಿ ಬಾಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳಾದ ಡಾ. ವೆಂಕಟೇಶ್ ಎಂ.ಡಿ, ಬಾ.ಆ.ಸೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯತ್ರಿ, ಜಿಲ್ಲಾಧಿಕಾರಿ ಕೆ.ಎಮ್. ಜಾನಕಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.