ಧನ್ನೂರ ದಂಪತಿಗಳಿಂದ ಪೂಜ್ಯರಿಗೆ ಸತ್ಕಾರ

ಬಸವ ಮೀಡಿಯಾ
ಬಸವ ಮೀಡಿಯಾ

ಬೀದರ

ಜಾಗತಿಕ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ ಧನ್ನೂರ ಅವರ ಜನ್ಮದಿನದ ಸುವರ್ಣ ಮಹೋತ್ಸವ ಮತ್ತು ಸುವರ್ಣಾ ಮತ್ತು ಬಸವರಾಜ ಧನ್ನೂರ ಅವರ ಕಲ್ಯಾಣ ಮಹೋತ್ಸವದ ಬೆಳ್ಳಿಹಬ್ಬ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು ಹಾಗು ಪೂಜ್ಯರನ್ನು ಸತ್ಕರಿಸಿ ದಂಪತಿಗಳಿರ್ವರು ಆಶಿರ್ವಾದ ಪಡೆದರು.

ಪೂಜ್ಯ ನಾಡೋಜ ಡಾ, ಬಸವಲಿಂಗ ಪಟ್ಟದ್ದೇವರು, ಸಿದ್ಧಾರೂಢ ಮಠದ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳು, ವಿಜಯಪುರ ಜ್ಞಾನ ಯೋಗಾಶ್ರಮದ ಪೂಜ್ಯ ಬಸವಲಿಂಗ ಮಹಾಸ್ವಾಮಿಗಳು, ಪೂಜ್ಯರಾದ ಗುರುಬಸವ ಪಟ್ಟದ್ದೇವರು, ಹುಲಸೂರಿನ ಪೂಜ್ಯ ಶಿವಾನಂದ ಮಹಾಸ್ವಾಮಿಗಳು, ಪೂಜ್ಯ ಸಿದ್ದರಾಮ ಶರಣರು ಬೆಲ್ದಾಳ, ಪೂಜ್ಯರಾದ ಗಂಗಾಂಬಿಕೆ ಅಕ್ಕನವರು, ಪೂಜ್ಯರಾದ ಪ್ರಭುದೇವ ಮಹಾಸ್ವಾಮಿಗಳು, ಪೂಜ್ಯರಾದ ಮಾತೆ ಮೈತ್ರಾದೇವಿಯವರು ಸೇರಿದಂತೆ ಅನೇಕ ಪೂಜ್ಯರನ್ನು ಸತ್ಕರಿಸಲಾಯಿತು.

ಇದೇ ಸಂದರ್ಭದಲ್ಲಿ ಹೊರತಂದ ‘ಬಸವ ವಚನ’ ಗ್ರಂಥವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಬಿಡುಗಡೆ ಮಾಡಿದರು.

ವಚನಗಳಲ್ಲಿ ಜೀವನ ಮೌಲ್ಯಗಳಿವೆ. ಎಲ್ಲ ಸಮಸ್ಯೆಗಳಿಗೂ ಪರಿಹಾರ ಇದೆ. ಹೀಗಾಗಿ ಬಸವಾದಿ ಶರಣರ ವಚನಗಳನ್ನು ಎಲ್ಲರೂ ಓದಿ, ಅವುಗಳ ಸಾರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಖಂಡ್ರೆ ತಿಳಿಸಿದರು.

ಶಾಸಕಿ ಶಶಿಕಲಾ ಜೊಲ್ಲೆ ಮಾತನಾಡಿ, ಪ್ರಸ್ತುತ ಮಕ್ಕಳಿಗೆ ಉತ್ತಮ ಸಂಸ್ಕಾರದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಸಚಿವರಾದ ಈಶ್ವರ ಖಂಡ್ರೆ, ರಹೀಂಖಾನ್, ಮಾಜಿ ಸಚಿವರಾದ ರಾಜಶೇಖರ ಪಾಟೀಲ, ಬಂಡೆಪ್ಪ ಕಾಶೆಂಪುರ, ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ, ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾ ಸಾಹೇಬ ಜೊಲ್ಲೆ, ಮಾಜಿ ಶಾಸಕ ಪ್ರಕಾಶ ಖಂಡ್ರೆ, ವಿಧಾನ ಪರಿಷತ್ ಸದಸ್ಯರಾದ ಚಂದ್ರಶೇಖರ ಪಾಟೀಲ, ಮಾರುತಿರಾವ್ ಮುಳೆ, ಜಿ.ಎನ್. ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಗುರುನಾನಕ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಬಲಬೀರಸಿಂಗ್ ದಂಪತಿಯನ್ನು ಸನ್ಮಾನಿಸಲಾಯಿತು.

ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು, ಸಿದ್ಧಾರೂಢ ಮಠದ ಡಾ. ಶಿವಕುಮಾರ ಸ್ವಾಮೀಜಿ, ವಿಜಯಪುರದ ಜ್ಞಾನ ಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಹುಲಸೂರಿನ ಶಿವಾನಂದ ಸ್ವಾಮೀಜಿ, ಬರ್ದಿಪುರದ ಅವಧೂತಗಿರಿ ಮಹಾರಾಜ, ಭಾಲ್ಕಿಯ ಗುರುಬಸವ ಪಟ್ಟದ್ದೇವರು, ಮನ್ನಾಎಖ್ಖೆಳ್ಳಿಯ ಮಾತೆ ಮೈತ್ರಾದೇವಿ, ಬಸವ ಸೇವಾ ಪ್ರತಿಷ್ಠಾನದ ಡಾ. ಗಂಗಾಂಬಿಕೆ ಅಕ್ಕ, ಲಿಂಗಾಯತ ಮಹಾ ಮಠದ ಪ್ರಭುದೇವ ಸ್ವಾಮೀಜಿ, ರಾಜಮಲ್ಲಯ್ಯ ಸ್ವಾಮಿ ಬೋರಂಚಿ ಸಾನಿಧ್ಯ ವಹಿಸಿದ್ದರು. ಸ್ಫೂರ್ತಿ ಧನ್ನೂರ ಸ್ವಾಗತಿಸಿದರು. ಮನೀಶಾ ಪಾಟೀಲ ನಿರೂಪಿಸಿದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Dv8eAoC8n2rJOtZKYt4o86

Share This Article
Leave a comment

Leave a Reply

Your email address will not be published. Required fields are marked *