ಕೊಳ್ಳೇಗಾಲ
ಪಟ್ಟಣದಲ್ಲಿ ಬಸವ ಮಹಾಮನೆಯ ಮುಂದುವರಿದ ಕಾಮಗಾರಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಶನಿವಾರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರಕ್ಕೆ ನೀಡಿದ್ದ 25 ಕೋಟಿ ರೂ.ವಿಶೇಷ ಅನುದಾನದಲ್ಲಿ ಎಲ್ಲ ಸಮುದಾಯದ ಭವನಗಳ ಅಭಿವೃದ್ಧಿಗೆ ಅನುದಾನ ನೀಡಲಾಗಿದೆ. ಅದರಲ್ಲಿ ಶ್ರೀ ಮಹದೇಶ್ವರ ಕಾಲೇಜು ಸಮೀಪದಲ್ಲಿ ನಿರ್ಮಾಣವಾಗುತ್ತಿರುವ ಬಸವ ಮಹಾಮನೆಗೆ 25 ಲಕ್ಷ ರೂ.ಗಳನ್ನು ಮುಂದುವರಿದ ಕಾಮಗಾರಿಗೆ ನೀಡಲಾಗಿದೆ ಎಂದರು.
ಚಾಮುಲ್ ಅಧ್ಯಕ್ಷ ನಂಜುಂಡಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರಾಜೇಂದ್ರ ಮೋಳೆ, ನಗರಸಭೆ ಸದಸ್ಯೆ ಸುಮಾ ಸುಬ್ಬಣ್ಣ, ವೀರಶೈವ ಲಿಂಗಾಯತ ನೌಕರರ ಬಸವ ಸೇವಾ ಸಮಿತಿ ಅಧ್ಯಕ್ಷ ಮಲ್ಲೇಶಪ್ಪ, ಬಸವ ಸೇವಾ ಪತ್ತಿನ ಸಹಕಾರ ಸಂಘ ಅಧ್ಯಕ್ಷ ನಂದೀಶ್, ಮಹಾಮನೆ ಟ್ರಸ್ಟ್ ಕಾರ್ಯದರ್ಶಿ ವೀರಭದ್ರಸ್ವಾಮಿ, ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಉಪಾಧ್ಯಕ್ಷ ತಿಮ್ಮರಾಜೀಪುರ ರಾಜು, ಕಾರ್ಯದರ್ಶಿ ಮಹೇಶ್ ಇದ್ದರು.