ಬೆಂಗಳೂರು
ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಆಗಸ್ಟ್ 18 ನಗರದಲ್ಲಿ ಬಸವ ಸಂಘಟನೆಗಳ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.
ಸಭೆ ಬೆಳಿಗ್ಗೆ 10 ಗಂಟೆಗೆ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ನಯನ ಸಭಾಂಗಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ಮಹಾ ಪ್ರಧಾನ ಕಾರ್ಯದರ್ಶಿ ಶಿವಾನಂದ. ಎಂ.ಜಮಾದಾರ್ ರವರ ನೇತೃತ್ವದಲ್ಲಿ ನಡೆಯಲಿದೆ.
“ಸಮಾರೋಪ ಕಾರ್ಯಕ್ರಮವನ್ನು ಅಕ್ಟೋಬರ್ 5ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ತಾಗಿ ನಡೆಸಲು ತೀರ್ಮಾನಿಸಲಾಗಿದೆ. ಈ ಸಭೆಗೆ ಬಸವಾಭಿಮಾನಿಗಳು ಆಗಮಿಸಿ ಸಲಹೆಗಳನ್ನು ನೀಡಬೇಕು,” ಎಂದು ಜಾಲಿಮಾದ ಪ್ರೊ.ವೀರಭದ್ರಯ್ಯ ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಕೆ. ವಿ. ನಾಗರಾಜಮೂರ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ.
ಸೆಪ್ಟೆಂಬರ್ 1 ರಿಂದ ಅಕ್ಟೋಬರ್ 5ರವರೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಡೆಯಲಿರುವ ಅಭಿಯಾನವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವ ದಳ, ಶರಣ ಸಾಹಿತ್ಯ ಪರಿಷತ್, ಬಸವ ಸಮಿತಿ ಮತ್ತು ಬಸವಪರ ಸಂಘಟನೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದೆ.