ಮೈಸೂರು
ಕೇಂದ್ರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜಸಿಂಗ್ ಚೌಹಾಣ್ ಸುತ್ತೂರು ಮಠಕ್ಕೆ ಭೇಟಿ ನೀಡಿ ಪೂಜ್ಯ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 110 ನೇ ಜನ್ಮ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಮಠದ ಆವರಣದಲ್ಲಿ ಸಸಿ ನೆಟ್ಟು ನೀರೆರೆದರು.
“ಸುತ್ತೂರು ಶ್ರೀಗಳು ನಾಲ್ಕು ನೂರಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡುತ್ತಿರುವುದು ಶ್ಲಾಘನೀಯ,” ಎಂದು ಚೌಹಾಣ್ ಹೇಳಿದರು.
ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಹಾಗೂ ತುಮಕೂರು ಸಿದ್ಧಗಂಗಾ ಮಠಾಧ್ಯಕ್ಷರಾದ ಪೂಜ್ಯ ಸಿದ್ಧಲಿಂಗ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಿತು.



ಅನೇಕ ಹರಗುರುಚರಮೂರ್ತಿಗಳು, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ, ಶಾಸಕರಾದ ಗಣೇಶ್ ಪ್ರಸಾದ್, ಜಿ.ಟಿ.ದೇವೇಗೌಡ, ಎ.ಆರ್. ಕೃಷ್ಣಮೂರ್ತಿ, ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ್, ಶ್ರೀವತ್ಸ, ಎಂಎಲ್ಸಿ ವಿವೇಕಾನಂದ, ಕಾಡಾ ಅಧ್ಯಕ್ಷರಾದ ಮರಿಸ್ವಾಮಿ, ಮಾಜಿ ಶಾಸಕರಾದ ಬಾಲರಾಜ್, ನಿರಂಜನ್ ಗುಂಡ್ಲುಪೇಟೆ ಅವರು ಸೇರಿದಂತೆ ಹಲವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.