ಬೆಂಗಳೂರು

ಕಲಬುರ್ಗಿ ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆ ಭಗ್ನ ಘಟನೆಯನ್ನು ಬಸವ ಬ್ರಿಗೇಡ್ ತೀವ್ರವಾಗಿ ಖಂಡಿಸುತ್ತದೆ.
12ನೇ ಶತಮಾನದಲ್ಲಿ ಸಮಾಜದಲ್ಲಿರುವ ಮೌಢ್ಯಾಚರಣೆ ಮತ್ತು ಮೂಢನಂಬಿಕೆಗಳ ವಿರುದ್ಧ ತಮ್ಮ ವಚನಗಳ ಮುಖಾಂತರ ಜನರನ್ನು ಜಾಗೃತಿಗೊಳಿಸಿದ ಮಹಾನ್ ವ್ಯಕ್ತಿಯ ಪ್ರತಿಮೆಯನ್ನು ವಿಕೃತಗೊಳಿಸಿರುವದು ಶರಣರಿಗೆ ಮಾಡಿರುವ ಅವಮಾನವಾಗಿದೆ.
ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮಕೈಗೊಂಡು, ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದೆ.
ಸರ್ಕಾರ ಹಾಗೂ ಪೊಲೀಸ್ ಇಲಾಖೆ ನ್ಯಾಯಯುತ ತನಿಖೆ ನಡೆಸಿ, ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ ಎಂದು ಬಸವ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷರಾದ
ಸುನೀಲ್ ಕಾಂದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.