ಬೆಂಗಳೂರು
ಮನೆಗೆ ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದಾಖಲಾಗಿರುವ ಪೋಕ್ಸೊ ಪ್ರಕರಣದ ಮೊದಲ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಇಲ್ಲಿನ ವಿಶೇಷ ಸೆಷನ್ಸ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಪ್ರಕರಣದ ಆರೋಪಿಗಳಾದ ಬಿ.ಎಸ್.ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ.ಮರಿಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿ ಡಿಸೆಂಬರ್ 2ಕ್ಕೆ ಕೋರ್ಟ್‌ಗೆ ಖುದ್ದು ಹಾಜರಾಗಲು ಆದೇಶಿಸಲಾಗಿದೆ.
ಈ ಸಂಬಂಧ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ಎನ್.ನಾಯಕ್ ಮಂಗಳವಾರ ಪ್ರಸ್ತುತಪಡಿಸಿದ ಅರ್ಜಿಯನ್ನು ಪುರಸ್ಕರಿಸಿದ ಬೆಂಗಳೂರಿನ ಎಫ್‌ಟಿಎಸ್ ವಿಶೇಷ ಕೋರ್ಟ್–Iರ ನ್ಯಾಯಾಧೀಶೆ ಸುಜಾತಾ ಅವರು 30 ದಿನಗಳ ಒಳಗಾಗಿ ಸಾಕ್ಷಿ ವಿಚಾರಣೆ ಆಗಬೇಕು ಎಂಬ ಕಾರಣಕ್ಕೆ ಸಮನ್ಸ್ ಜಾರಿಗೆ ಆದೇಶಿಸಿದರು.
ಬೆಂಗಳೂರಿನ ವಿಶೇಷ ಕೋರ್ಟ್ ಹೊರಡಿಸಿರುವ ಸಮನ್ಸ್ ಜಾರಿ ಆದೇಶವನ್ನು ರದ್ದುಗೊಳಿಸಬೇಕು’ ಎಂದು ಕೋರಿ ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ.ಮರಿಸ್ವಾಮಿ ಸಲ್ಲಿಸಿದ್ದ ಎರಡು ಪ್ರತ್ಯೇಕ ರಿಟ್ ಅರ್ಜಿಗಳನ್ನು ಪುರಸ್ಕರಿಸಲು ಹೈಕೋರ್ಟ್ ಇತ್ತೀಚೆಗಷ್ಟೇ ನಿರಾಕರಿಸಿತ್ತು.
