ತಿ. ನರಸೀಪುರ:
ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ನಿರ್ಮಿಸಲಾಗಿರುವ ನವೀಕೃತ ‘ಸಭಾ ಭವನ’ದ ಉದ್ಘಾಟನಾ ಸಮಾರಂಭ ಬುಧವಾರ ನಡೆಯಿತು.

ಸುತ್ತೂರು ಮಠಾಧೀಶರಾದ ಶಿವರಾತ್ರಿ ದೇಶೀಕೆಂದ್ರ ಮಹಾಸ್ವಾಮಿಗಳು, ಸಿದ್ಧಗಂಗಾ ಮಠದ ಕಿರಿಯ ಶ್ರೀಗಳಾದ ಶಿವಸಿದ್ದೇಶ್ವರ ಸ್ವಾಮಿಗಳು, ಸೂರ್ಯ ಸಿಂಹಾಸನ ಮಠದ ಸಿದ್ದಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಮಲೆಮಹದೇಶ್ವರ ಬೆಟ್ಟದ ಸಾಲೂರು ಮಠದ ಡಾ. ಶಾಂತಮಲ್ಲಿಕಾರ್ಜುನ ಸ್ವಾಮಿಗಳು, ದೇಗುಲಮಠದ ಕಿರಿಯ ಶ್ರೀಗಳಾದ ಡಾ. ಚನ್ನಬಸವ ಮಹಾಸ್ವಾಮಿಗಳು ಸೇರಿದಂತೆ ಅನೇಕ ಹರಗುರುಚರಮೂರ್ತಿಗಳು ಸಾನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಅ. ಭಾ. ವೀರಶೈವ ಲಿಂಗಾಯತ ಮಹಾಸಭಾದ ಕಾರ್ಯದರ್ಶಿ, ಸಚಿವ ಈಶ್ವರ ಖಂಡ್ರೆ, ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಶಾಸಕರಾದ ಗಣೇಶ ಪ್ರಸಾದ, ಮಾಜಿ ಶಾಸಕರಾದ ಅಶ್ವಿನಕುಮಾರ, ಮುಖಂಡರುಗಳಾದ ಡಾ. ಎಂ. ರೇವಣ್ಣ, ಸುಬ್ಬಣ್ಣ, ಸದಾನಂದ, ಗುರುಸ್ವಾಮಿ ಸೇರಿದಂತೆ ಹಲವಾರು ಪ್ರಮುಖರು, ಭಕ್ತಾಧಿಗಳು ಉಪಸ್ಥಿತರಿದ್ದರು.

