ಬೆಳಗಾವಿ
ಕಳೆದ ಅಧಿವೇಶನದ ವೇಳೆ ನಡೆದ ಪೊಲೀಸರು ಲಾಠಿಚಾರ್ಜ್ ದೌರ್ಜನ್ಯ ಖಂಡಿಸಲು ಸುವರ್ಣ ವಿಧಾನಸೌಧಕ್ಕೆ ತೆರಳುತ್ತಿದ್ದ ಪಂಚಮಸಾಲಿ ಹೋರಾಟಗಾರರನ್ನು ಪೊಲೀಸರು ಬುಧವಾರ ವಶಕ್ಕೆ ಪಡೆದರು.
ನಗರದ ಗಾಂಧಿ ಭವನದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾಸಕರಾದ ಅರವಿಂದ ಬೆಲ್ಲದ, ಬಸನಗೌಡ ಪಾಟೀಲ ಯತ್ನಾಳ, ಸಿದ್ದು ಸವದಿ, ಸಿ.ಸಿ.ಪಾಟೀಲ ನೇತೃತ್ವದಲ್ಲಿ ಕೈಗೆ ಕಪ್ಪು ಪಟ್ಟಿ ಧರಿಸಿದ ಹೋರಾಟಗಾರರು ಕೈಯಲ್ಲಿ ಧ್ವಜ ಹಿಡಿದು ಮೌನ ಪ್ರತಿಭಟನೆ ಆರಂಭಿಸಿದರು.
ಪ್ರತಿಭಟನಾ ರ್ಯಲಿಯೂ ಕಾಲೇಜು ರಸ್ತೆಯಿಂದ ಚನ್ನಮ್ಮ ವೃತ್ತದ ಮೂಲಕ ಹಾಯ್ದು ಸಂಗೊಳ್ಳಿರಾಯಣ್ಣ ವೃತ್ತದವರೆಗೆ ಸಾಗಿತು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು.
ಚನ್ನಮ್ಮ ವೃತ್ತದಲ್ಲಿ ಪ್ರತಿಭಟನಾಕಾರರು ರಸ್ತೆಯ ಮೇಲೆಯೇ ಕುಳಿತು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ನಡೆಸಿದರು. ಧರಣಿ ಕುಳಿತಿದ್ದರಿಂದ ಪರಿಸ್ಥಿತಿ ವಿಕೋಪಕ್ಕೆ ತೆರಳಿತು. ಈ ವೇಳೆ ಪೊಲೀಸ್ ಅರವಿಂದ ಬೆಲ್ಲದ, ಬಸವಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಇತರ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಈ ವೇಳೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ ಮೀಸಲಾತಿ ಘೋಷಿಸುವ ವಿಚಾರದಲ್ಲಿ ಈ ಸರ್ಕಾರ ಮಲಗಿದೆ. ಜೊತೆಗೆ ಕೋರ್ಟ್ ಆದೇಶ ನೀಡಿದರೂ ಲಾಠಿ ಚಾರ್ಜ್ ನಡೆಸಿದ ಅಧಿಕಾರಿಗಳ ವಿರುದ್ಧ ಈವರೆಗೂ ಕ್ರಮ ಆಗಿಲ್ಲ, ಎಂದು ಹೇಳಿದರು.
ಬಸವಜಯ ಮೃತ್ಯುಂಜಯ ಸ್ವಾಮೀಜಿ ಮೀಸಲಾತಿ ಸಿಗುವವರೆಗೂ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
