” ಸಂಗಮ ಸಿರಿ ” ಪ್ರಶಸ್ತಿಗೆ ಡಾ. ಸಾದರ, ಡಾ. ಪಟ್ಟಣ ಆಯ್ಕೆ

ಬಸವ ಮೀಡಿಯಾ
ಬಸವ ಮೀಡಿಯಾ

ಹುಬ್ಬಳ್ಳಿ:

ಹಿರಿಯ ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಈ ವರ್ಷ ಡಾ. ಬಸವರಾಜ ಸಾದರ ಹಾಗೂ ಡಾ. ಶಶಿಕಾಂತ ಪಟ್ಟಣ ಅವರು ಆಯ್ಕೆಯಾಗಿದ್ದಾರೆ.

 ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕಳೆದ ನಾಲ್ಕು ವರ್ಷಗಳಿಂದ ವಿವಿಧ ಸಾಹಿತ್ಯ ಕ್ಷೇತ್ರದ ಸಾಧಕರನ್ನು ಗುರುತಿಸಿ “ಸಂಗಮ ಸಿರಿ ” ರಾಜ್ಯಮಟ್ಟದ ಪ್ರಶಸ್ತಿ ನೀಡುತ್ತ ಬಂದಿದೆ.

ಈ ವರ್ಷ ವಚನ ಸಾಹಿತ್ಯ ಪೂರಕ ಸಾಹಿತ್ಯದಲ್ಲಿ ಕಾರ್ಯ ಮಾಡಿದವರಿಗೆ ” ಸಂಗಮ ಸಿರಿ ” ಪ್ರಶಸ್ತಿ ನೀಡಲು ನಿರ್ಧರಿಸಿದಂತೆ, ಈ ಕ್ಷೇತ್ರದಲ್ಲಿ ಕಾರ್ಯ ಮಾಡಿದ ಆಕಾಶವಾಣಿ ನಿರ್ದೇಶಕರಾಗಿ ನಿವೃತ್ತರಾದ ಬೆಂಗಳೂರಿನ ಡಾ. ಬಸವರಾಜ ಸಾದರ ಹಾಗೂ ಮಹಾರಾಷ್ಟ್ರ ಪುಣೆಯ ವಿಜ್ಞಾನಿ ಡಾ. ಶಶಿಕಾಂತ ಪಟ್ಟಣ ಅವರನ್ನು ಆಯ್ಕೆ ಮಾಡಲಾಗಿದೆ.

ಡಾ. ಬಸವರಾಜ ಸಾದರ ಅವರು ಆಕಾಶವಾಣಿಯ ದಕ್ಷಿಣವಲಯ ನಿರ್ದೇಶಕರಾಗಿ ನಿವೃತ್ತರಾಗಿ ಶರಣ ಸಾಹಿತ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ೪೧ ಮೌಲಿಕ ಕೃತಿಗಳನ್ನು ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಆಕಾಶವಾಣಿಗಳಲ್ಲಿ ವಚನಗಳ ವಿವರಣೆ ನೀಡುವ ಮೂಲಕ ವಚನಗಳ ಸಾರವನ್ನು ಮನೆ ಮನೆಗೆ ತಲುಪಿಸಿದ ಕೀರ್ತಿ ಇವರದು. ಜೊತೆಗೆ ಕಾರ್ಯಕ್ರಮಗಳ ಸಂಘಟನೆ, ಬರವಣಿಗೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸದ್ಯ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯರು ಆಗಿದ್ದಾರೆ.

ಡಾ. ಶಶಿಕಾಂತ ಪಟ್ಟಣ ಅವರು ಮೂಲತಃ ರಾಮದುರ್ಗದವರು. ಸಧ್ಯ ಪುಣೆಯಲ್ಲಿ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕರು. ಔಷಧೀಯ ವಿಜ್ಞಾನದ ವಿಜ್ಞಾನಿಯಾದ ಅವರು, ವಚನ ಸಾಹಿತ್ಯದ ಕುರಿತು ಹಲವು ಕೆಲಸಗಳನ್ನು ಮಾಡಿದ್ದಾರೆ. ವಿವಿಧ ಪ್ರಕಾರದ ೬೪ ಕೃತಿಗಳ ರಚನೆ, ಉಪನ್ಯಾಸ, ಸಂಘಟನೆ ಮೂಲಕ ಶರಣ ಸಾಹಿತ್ಯ ಪೂರಕ ಕಾರ್ಯವನ್ನು ಮಾಡಿದ್ದಾರೆ.

ಈ ಇರ್ವರಿಗೂ ತಲಾ ೫,೦೦೦ ರೂ. ನಗದು ಹಾಗೂ ಪ್ರಶಸ್ತಿ ಫಲಕ ನೀಡಿ ಇದೇ ಡಿ. ೨೮ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಜಿ. ಬಿ. ಗೌಡಪ್ಪಗೋಳ, ಗೌರವಾಧ್ಯಕ್ಷ ಗಣಪತಿ ಗಂಗೊಳ್ಳಿ,‌ ಕಾರ್ಯಕ್ರಮ ಸಂಯೋಜಕ ಡಾ. ಪ್ರಭು ಗಂಜೀಹಾಳ ತಿಳಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/H81yNL3dGRcHb7EBxL5oqr

Share This Article
Leave a comment

Leave a Reply

Your email address will not be published. Required fields are marked *