ಬೆಂಗಳೂರು
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಲಿಂಗೈಕ್ಯರಾಗಿರುವ ಹಿನ್ನಲೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಹೊಸ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಮುಂದಿನ ತಿಂಗಳು ನಡೆಯಲಿದೆ.

ಮಹಾಸಭಾದ ಹಿರಿಯ ಉಪಾಧ್ಯಕ್ಷ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹಂಗಾಮಿಯಾಗಿ ರಾಷ್ಟ್ರೀಯ ಅಧ್ಯಕ್ಷರ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಸಂಘಟನೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಅವರೇ ಅಧಿಕೃತವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ.
ಅವರ ತಂದೆ ಮಾಜಿ ಸಚಿವ ಭೀಮಣ್ಣ ಖಂಡ್ರೆ ಹಿಂದಿನ ಅಧ್ಯಕ್ಷರಾಗಿದ್ದರು.
“ಕಾರ್ಯಕಾರಿ ಸಮಿತಿಯ 65 ಸದಸ್ಯರಿಗೆ ಹೊಸ ಅಧ್ಯಕ್ಷರ ಆಯ್ಕೆ ಮಾಡುವ ಅಧಿಕಾರವಿದೆ. ಅವರ ಸಭೆಯನ್ನು ಜನವರಿ ಮೊದಲನೇ ಅಥವಾ ಎರಡನೇ ವಾರ ಕರೆಯಲಾಗುತ್ತದೆ,” ಎಂದು ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ಹೇಳಿದರು.
ಶಾಮನೂರು ಶಿವಶಂಕರಪ್ಪ ಅವರ ಶ್ರದ್ಧಾಂಜಲಿ ಕಾರ್ಯಕ್ರಮ ಡಿಸೆಂಬರ್ 26 ದಾವಣಗೆರೆಯಲ್ಲಿ ನಡೆಯಲಿದೆ.
