ಬಸವಕಲ್ಯಾಣ
ಬಸವ ತತ್ವ ಪ್ರಚಾರ, ಪ್ರಸಾರಕ್ಕಾಗಿ ಶ್ರಮಿಸುತ್ತಿರುವ ಹುಲಸೂರನ ಶ್ರೀ ಡಾ. ಶಿವಾನಂದ ಮಹಾಸ್ವಾಮೀಜಿ ಹಾಗೂ ಇಳಕಲ್ಲನ ಶ್ರೀ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಶ್ರೀ ಡಾ. ಗುರುಮಹಾಂತ ಸ್ವಾಮೀಜಿ ಅವರಿಗೆ ಹಾರಕೂಡ ಮಠದಿಂದ ಬಸವ ಭಾನು ಪ್ರಶಸ್ತಿಯನ್ನು ಪ್ರದಾನ ಮಾಡಿ, ಗೌರವಿಸಲಾಯಿತು.
ಹಾರಕೂಡನಲ್ಲಿ ಶ್ರೀ ಸದ್ಗುರು ಚನ್ನಬಸವ ಶಿವಯೋಗಿಗಳ 74ನೇ ಜಾತ್ರಾ ಮಹೋತ್ಸವ ನಿಮಿತ್ತ ಬುಧವಾರ ಸಂಜೆ ನಡೆದ ಶಿವಾನುಭವ ಚಿಂತನ ಕಾರ್ಯಕ್ರಮದಲ್ಲಿ ಇಳಕಲ್ ಹಾಗೂ ಹುಲಸೂರು ಶ್ರೀಗಳಿಗೆ ಹಾರಕೂಡ ಸಂಸ್ಥಾನ ಹಿರೇಮಠದ ಪೀಠಾಧಿಪತಿ ಶ್ರೀ ಡಾ. ಚನ್ನವೀರ ಶಿವಾಚಾರ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಸಾಯಗಾಂನ ಶ್ರೀ ಶಿವಾನಂದ ದೇವರು, ಶ್ರೀ ಸಿದ್ದಲಿಂಗ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಶಾಸಕರಾದ ಶರಣು ಸಲಗರ, ಡಾ. ಸಿದ್ಧಲಿಂಗಪ್ಪಾ ಪಾಟೀಲ, ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ, ಮಾಜಿ ಸಚಿವ ರೇವುನಾಯಕ ಬೆಳಮಗಿ, ಮಾಜಿ ಎಂಎಲ್ಸಿ ವಿಜಯಸಿಂಗ್, ಕಾಡಾ ಅಧ್ಯಕ್ಷ ಬಾಬು ಹೊನ್ನಾನಾಯಕ, ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ ತಾಳಂಪಳ್ಳಿ, ಪ್ರಮುಖರಾದ ಸಂತೋಷ ಪಾಟೀಲ, ಬಸವರಾಜ ಪಾಟೀಲ ಸೇರಿದಂತೆ ಪೂಜ್ಯರು, ಪ್ರಮುಖರು ಉಪಸ್ಥಿತರಿದ್ದರು.
