ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ, ಸುಳ್ಳು ಸುದ್ದಿ ಹರಡಬೇಡಿ: ಈಶ್ವರ ಖಂಡ್ರೆ

ಬಸವ ಮೀಡಿಯಾ
ಬಸವ ಮೀಡಿಯಾ

ಬೀದರ್

ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಪುತ್ರ, ಉಸ್ತುವಾರಿ ಸಚಿವರೂ ಆದ ಈಶ್ವರ ಖಂಡ್ರೆ ಅವರ ಸೋಮವಾರ ಸಂಜೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಯಾವುದೇ ರೀತಿಯ ಸುಳ್ಳು ಹಾಗೂ ಆಧಾರರಹಿತ ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮನವಿ ಮಾಡಿದ್ದಾರೆ.

“ತಂದೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರು ಸತತವಾಗಿ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಆಸೆಯಂತೆ ಮನೆಗೆ ಶಿಫ್ಟ್ ಮಾಡಿದ್ದೇವೆ. ಜನಪರ, ಜೀವಪರ ಹೋರಾಟಗಾರರು, ಮೌಲ್ಯಾಧಾರಿತ ರಾಜಕಾರಣ ಮಾಡಿದ ಧೀಮಂತ ನಾಯಕರಾಗಿದ್ದರು. ಅವರು ಇನ್ನಷ್ಟು ದಿನ ನಮ್ಮೊಂದಿಗೆ ಇರಬೇಕು, ಅದಕ್ಕಾಗಿ ದೇವರಲ್ಲಿ ಪ್ರಾರ್ಥಿಸೋಣ. ಮುಖ್ಯಮಮತ್ರಿಗಳು ಫೋನ್ ಮಾಡಿ, ತಂದೆಯವರ ಆರೋಗ್ಯ ವಿಚಾರಿಸಿದ್ದು, ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದೇನೆ,” ಎಂದು ಈಶ್ವರ ಖಂಡ್ರೆ ಹೇಳಿದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ 102 ವರ್ಷದ ಭೀಮಣ್ಣ ಖಂಡ್ರೆ ನಗರದ ಗುದಗೆ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಕಳೆದ ೧೫ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

ರಕ್ತದೊತ್ತಡ, ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನಲೆ ಶನಿವಾರ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ನಂತರ ಚಿಕಿತ್ಸೆಯಿಂದ ಚೇತರಿಕೊಂಡಿದ್ದರು.

ಆದರೆ, ಸೋಮವಾರ ನಸುಕಿನ ಜಾವ ಮತ್ತೆ ಆರೋಗ್ಯ ಹದಗೆಟ್ಟಿತ್ತು. ಬಿಪಿ ಮತ್ತು ಪಲ್ಸ್ ರೇಟ್ ಕಡಿಮೆಯಾಗಿ, ಸ್ಥಿತಿ ಗಂಭೀರವಾಗಿತ್ತು. ಜೀವನದ ಕೊನೆ ಕ್ಷಣಗಳನ್ನು ಮನೆಯಲ್ಲಿಯೇ ಕಳೆಯಬೇಕೆಂಬುದು ಭೀಮಣ್ಣ ಖಂಡ್ರೆ ಅವರ ಅಂತಿಮ ಆಸೆಯಂತೆ ಅವರನ್ನು ಭಾಲ್ಕಿಯ ಸ್ವಗೃಹಕ್ಕೆ ಶಿಫ್ಟ್ ಮಾಡಲಾಗಿದೆ.

ಆಕ್ಸಿಜನ್ ಮೇಲೆ ವೈದ್ಯರ ತಂಡ ಸತತವಾಗಿ ಚಿಕಿತ್ಸೆ ನೀಡುತ್ತಿದೆ. ಸಚಿವ ಈಶ್ವರ ಖಂಡ್ರೆ ಮತ್ತು ಸಂಸದ ಸಾಗರ್ ಖಂಡ್ರೆ ಜತೆಗಿದ್ದಾರೆ. ಮಠಾಧೀಶರುಗಳು, ನಾಯಕರು ಮತ್ತು ಅಭಿಮಾನಿಗಳು ಭೇಟಿ ನೀಡುತ್ತಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/FoRS2gZkHkaEzqaRtWk0ZP

Share This Article
Leave a comment

Leave a Reply

Your email address will not be published. Required fields are marked *