ಬೆಂಗಳೂರು:
ನಯನ ರಂಗಮಂದಿರದಲ್ಲಿ ‘ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಜಯಂತಿ’ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿತ್ತು.
ಮಾನ್ಯ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ ಎಸ್. ತಂಗಡಗಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಹಾವೇರಿ ಜಿಲ್ಲೆ, ನರಸೀಪುರ ನಿಜಶರಣ ಅಂಬಿಗರ ಚೌಡಯ್ಯ ಪೀಠದ ಪೂಜ್ಯ ಶಾಂತಭೀಷ್ಮ ಚೌಡಯ್ಯ ಸ್ವಾಮಿಗಳು ಸಾನಿಧ್ಯ ವಹಿಸಿದ್ದರು.

ಇಲಾಖೆಯ ಕಾರ್ಯದರ್ಶಿಗಳಾದ ಜೆ. ಮಂಜುನಾಥ, ನಿರ್ದೇಶಕರಾದ ಕೆ.ಎಂ. ಗಾಯಿತ್ರಿ ಮತ್ತು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶ್ರೀ ಬಾಬುರಾವ್ ಚಿಂಚನಸೂರ, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಾಲಾ ಬಿ. ನಾರಾಯಣರಾವ, ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ ಗಂಗಾಧರ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಹಾಗೂ ಉಪನ್ಯಾಸಕರಾದ ಡಾ. ಸ್ವಾಮಿ ಎಚ್. ಮತ್ತು ಸಮುದಾಯದ ಮುಖಂಡರು, ಇಲಾಖೆಯ ಅಧಿಕಾರಿ-ಸಿಬ್ಬಂದಿ ವರ್ಗದವರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

