ಕಲಬುರಗಿ:
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಹಾಗೂ ವೈರಾಗ್ಯನಿಧಿ ಅಕ್ಕಮಹಾದೇವಿ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬರಹ ಬರೆದು ಪೋಸ್ಟ್ ಮಾಡಿದ ರಮಾಕಾಂತ ಎಂ. ಎಂಬುವವರನ್ನು ಬಂಧಿಸುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ಅವಂಟಿ ಆಗ್ರಹಿಸಿದ್ದಾರೆ.
ಸಮಾಜ ಸುಧಾರಕರು ಮತ್ತು ಶರಣರ ಕುರಿತು ಅವಹೇಳನಕಾರಿ ಪೋಸ್ಟ್ ಹಾಕುವ ಮೂಲಕ ರಾತ್ರೋರಾತ್ರಿ ಬೆಳಕಿಗೆ ಬರಬೇಕು ಎಂಬ ಉಮೇದು ಹೊಂದಿರುವ ರಮಾಕಾಂತ ಅವರ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಸಮಾಜದಲ್ಲಿ ಆಶಾಂತಿ ಉಂಟು ಮಾಡುವ ಇಂತಹ ವಿದ್ವಂಸಕ ವ್ಯಕ್ತಿಗಳ ವಿರುದ್ಧ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ರಾಜ್ಯದಾದ್ಯಂತ ಅನಿವಾರ್ಯವಾಗಿ ಹೋರಾಟ ಮಾಡಬೇಕಾಗುವುದು ಎಂದು ಅವರು ಎಚ್ಚರಿಸಿದ್ದಾರೆ.
