ಬೆಳಗಾವಿ :
ಮುಂಬರುವ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮೇಯರ್ ಸ್ಥಾನ ವೀರಶೈವ-ಲಿಂಗಾಯತ ಸಮುದಾಯಕ್ಕೆ ಆದ್ಯತೆಯಾಗಿ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ ಒತ್ತಾಯಿಸಿದ್ದಾರೆ.
ಮೇಯರ್ ಸ್ಥಾನ ಸಾಮಾನ್ಯ ಮಹಿಳೆ, ಉಪಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಸೇರಿದ್ದು, ಇಂತಹ ಸಂದರ್ಭದಲ್ಲಿ ವೀರಶೈವ-ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಕಡೆಗಣಿಸುವುದು ಸರಿಯಲ್ಲ.
ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ವೀರಶೈವ ಲಿಂಗಾಯತ ಸಮುದಾಯದ ಕೊಡುಗೆ ಬಹುಮುಖ್ಯವಾಗಿರುತ್ತದೆ. ಈ ಸಮುದಾಯವನ್ನು ಕಡೆಗಣಿಸದೆ ಮೇಯರ್ ಹುದ್ದೆಗೆ ಪರಿಗಣಿಸಬೇಕೆಂದು ಪ್ರಕಟಣೆ ಮೂಲಕ ಬೆಲ್ಲದ ಅವರು ಆಗ್ರಹಿಸಿದ್ದಾರೆ.
