ಕಲಘಟಗಿ: ಲಿಂಗಾನುಭಾವಿ ಶರಣರ ಬಳಗದಿಂದ ವಚನ ಕಂಠಪಾಠ ಸ್ಪರ್ಧೆ

ಬಸವ ಮೀಡಿಯಾ
ಬಸವ ಮೀಡಿಯಾ

ಕಲಘಟಗಿ:

ತಾಲ್ಲೂಕಿನ ಹಿರೇಹೊನ್ನಿಹಳ್ಳಿ ಗ್ರಾಮದ ಬಸವತತ್ವ ಲಿಂಗಾನುಭಾವಿ ಶರಣರ ಬಳಗದಿಂದ 893ನೇ ವಿಶ್ವಗುರು ಬಸವಣ್ಣ ಜಯಂತ್ಯೋತ್ಸವ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ತಾಲ್ಲೂಕು ಮಟ್ಟದ ವಚನ ಕಂಠಪಾಠ ಸ್ಪರ್ಧೆ ಏರ್ಪಡಿಸಲಾಗಿದೆ.

ಏಪ್ರಿಲ್ 19ರಂದು ಬೆಳಿಗ್ಗೆ 6 ಗಂಟೆಗೆ ಸಾಮೂಹಿಕ ಇಷ್ಟಲಿಂಗಾರ್ಚನೆ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ವಚನ ಕಂಠಪಾಠ ಸ್ಪರ್ಧೆ ನಡೆಯಲಿದೆ. ಸ್ಪರ್ಧೆಯನ್ನು ಪ್ರಾಥಮಿಕ ವಿಭಾಗ, ಪ್ರೌಢ ವಿಭಾಗ ಹಾಗೂ ಕಾಲೇಜು ವಿಭಾಗ ಎಂದು ವಿಂಗಡಿಸಲಾಗಿದೆ.

ಸಂಜೆ 6 ಗಂಟೆಗೆ ವಚನ ನೃತ್ಯ, ವಚನ ಗಾಯನ, ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಬಸವ ಜಯಂತಿಯಂದು ಏಪ್ರಿಲ್ 20ರಂದು ಬೆಳಿಗ್ಗೆ 8 ಗಂಟೆಗೆ ಬಸವಣ್ಣನವರ ಭಾವಚಿತ್ರದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಚನ ಪಠಣದೊಂದಿಗೆ ಮೆರವಣಿಗೆ ನಡೆಯಲಿದೆ.

ನಂತರ ಅನುಭವ ಮಂಟಪದ ಆವರಣದಲ್ಲಿ ಧ್ವಜಾರೋಹಣ, ಸಾಮೂಹಿಕ ಪ್ರಾರ್ಥನೆ ಹಾಗೂ ಅನುಭಾವ ಇರುತ್ತದೆ. ಕೊನೆಗೆ ಮಹಾಪ್ರಸಾದ ಜರುಗಲಿದೆ.

ತಾಲೂಕು ಮಟ್ಟದ ವಚನ ಸ್ಪರ್ಧೆಗೆ ಹೆಸರು ನೋಂದಾಯಿಸಲು ಮೊ: 9902995780 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/J7ms3D54f67LKI9uBwRD0M

Share This Article
Leave a comment

Leave a Reply

Your email address will not be published. Required fields are marked *