ಕಲಬುರಗಿ
893ನೇ ಬಸವ ಜಯಂತಿ ಅಂಗವಾಗಿ ಕಲಬುರಗಿ ಕೇಂದ್ರ ಕಾರಾಗೃಹದ ಒಳಾವರಣದಲ್ಲಿ ಸೋಮವಾರ ಭಕ್ತಿಭಾವದಿಂದ ಕಾರ್ಯಕ್ರಮ ನಡೆಯಿತು.
ಸಂಸ್ಥೆಯ ಪ್ರಭಾರಿ ಮುಖ್ಯ ಅಧೀಕ್ಷಕರಾದ ಬಿ.ಸುರೇಶ ಅವರು ಜಗಜ್ಯೋತಿ ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪ್ರತಿಯೊಬ್ಬರೂ ಸೋಮಾರಿತನವನ್ನು ತೊರೆದು ಕಾಯಕದಲ್ಲಿ ತೊಡಗಿಸಿಕೊಳ್ಳಬೇಕು. ಕಾಯಕದಿಂದ ಗಳಿಸಿದ ಸಂಪತ್ತಿನಲ್ಲಿ ಒಂದು ಭಾಗವನ್ನು ಸಮಾಜದ ಏಳಿಗೆಗಾಗಿ ಮೀಸಲಿಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ವೀಕ್ಷಕರಾದ ಶ್ರೀಕಾಂತ ರಂಜೇರಿ ಅವರು ಕೂಡ ಮಾತನಾಡಿದರು. ನಂತರ ಕಾರಾಗೃಹದ ಎಲ್ಲಾ ಬಂದಿಗಳು ಮತ್ತು ಸಿಬ್ಬಂದಿಗಳಿಗೆ ಸಿಹಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಜೈಲರ್‌ಗಳಾದ ಶ್ರೀಮಂತಗೌಡ ಪಾಟೀಲ, ಪುಂಡಲಿಕ ಟಿ.ಕೆ ಸೇರಿದಂತೆ ಕಾರಾಗೃಹದ ಲಿಪಿಕರು, ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕರಾದ ನಾಗರಾಜ ಮುಲಗೆ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.
ಕೃಪೆ ವಾರ್ತಾ ಭಾರತಿ
