2027ರ ಮಾರ್ಚ್‌ ಒಳಗೆ ಅನುಭವ ಮಂಟಪ ಪೂರ್ಣಗೊಳಿಸಲುಸೂಚನೆ

ಬಸವ ಮೀಡಿಯಾ
ಬಸವ ಮೀಡಿಯಾ

ಬೆಂಗಳೂರು

ಬಸವ ಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಅನುಭವ ಮಂಟಪದ ಕಾಮಗಾರಿಗೆ ವೇಗ ನೀಡಿ 2027ರ ಮಾರ್ಚ್‌ ತಿಂಗಳೊಳಗೆ ಪೂರ್ಣಗೊಳಿಸಲು ಬಸವಕಲ್ಯಾಣ ಅಭಿವೃದ್ಧಿ ಮಂಡಳಿಗೆ ಸೂಚಿಸಲಾಗಿದೆ.

ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಪಸ್ಥಿತಿಯಲ್ಲಿ ನಡೆದ ಆನ್ಲೈನ್ ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಅನುಭವ ಮಂಟಪ ಕಾಮಗಾರಿಯನ್ನು ಗಡುವಿನೊಳಗೆ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂಕಾಮಗಾರಿ ವಿಳಂಬವಾಗದಂತೆ ನೋಡಿಕೊಳ್ಳಬೇಕು ಎಂದು ಇಬ್ಬರೂ ಸಚಿವರು ನಿರ್ದೇಶನ ನೀಡಿದರು.

ಬೀದರ್ ಜಿಲ್ಲಾಡಳಿತ ಮತ್ತು ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ಹೆಚ್ಚು ಕ್ರಿಯಾಶೀಲವಾಗಿ ಕೆಲಸ ಮಾಡಬೇಕು. 2023ರಿಂದೀಚೆಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ 280 ಕೋಟಿ ಅನುಭವ ಮಂಟಪ ಅಭಿವೃದ್ಧಿಗಾಗಿ ಮಂಜೂರು ಮಾಡಿದ್ದಾರೆ ಎಂದು ಖಂಡ್ರೆ ಹೇಳಿದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/KEa0QcMUeol3Lxo87TDFPa

Share This Article
Leave a comment

Leave a Reply

Your email address will not be published. Required fields are marked *