ತಿರುವನಂತಪುರಂ (ಕೇರಳ):
ಕೇರಳ ಮೂಲದ ಕಾರ್ಯಕರ್ತ ಮಹೇಶ ಮಣಿಕಂಠನ್ ಅವರನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಸಚಿವರಾದ ಈಶ್ವರ್ ಖಂಡ್ರೆ ಅವರು ಮಹೇಶ ಮಣಿಕಂಠನ್ ಅವರನ್ನು ಈ ಹುದ್ದೆಗೆ ನಾಮನಿರ್ದೇಶನ ಮಾಡಿದ್ದಾರೆ.
ಕೇರಳದಲ್ಲಿ ಇತ್ತೀಚೆಗೆ ನಡೆದ ಬಸವ ಜಯಂತಿ ಸಮ್ಮೇಳನದಲ್ಲಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷರಾದ ವೆಂಕಟರೆಡ್ಡಿ ಡಿ. ಪಾಟೀಲ ಅವರು ಈ ಘೋಷಣೆಯನ್ನು ಮಾಡಿದರು.

ಇದೇ ಸಂದರ್ಭದಲ್ಲಿ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾದ ಸಚ್ಚಿದಾನಂದ ಮೂರ್ತಿ ಅವರು ಮಹೇಶ ಅವರಿಗೆ ಶಾಲು ಹೊದಿಸಿ ಸ್ವಾಗತಿಸಿದರು.
ಸಮಾವೇಶದಲ್ಲಿ ಮಹಾಸಭಾ ಕೇರಳ ರಾಜ್ಯ ಘಟಕದ ಅಧ್ಯಕ್ಷರಾದ ಬಿನು ಕೆ. ಶಂಕರ್, ಪ್ರಧಾನ ಕಾರ್ಯದರ್ಶಿ ಶ್ರೀಜಿತ್ ಕೆ. ಎಸ್., ಉಪಾಧ್ಯಕ್ಷ ಕೃಷ್ಣರಾಜ್ ಆರ್. ಪಿಳ್ಳೈ, ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯ ಇ. ಪಿ. ಜಯನ್ ಮತ್ತು ಕಾರ್ಯದರ್ಶಿ ಗಿರೀಶ್ ಕುಮಾರ್ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.
