ಕನ್ನೇರಿ ಸ್ವಾಮೀಜಿ ಕಲ್ಯಾಣ ಪ್ರವೇಶ ತಡೆಗೆ ಬುದ್ಧ, ಬಸವ, ಅಂಬೇಡ್ಕರ್ ಯುವ ಸಂಘಟನೆ ಆಗ್ರಹ

ಬಸವ ಮೀಡಿಯಾ
ಬಸವ ಮೀಡಿಯಾ

ಬೀದರ:

ಕನ್ನೇರಿ ಸ್ವಾಮಿಗಳ ಹೇಳಿಕೆಗಳು ಬುದ್ಧ, ಬಸವ ಮತ್ತು ಅಂಬೇಡ್ಕರ್ ಅನುಯಾಯಿಗಳ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದು, ಇಂತಹ ಹಿನ್ನೆಲೆಯಲ್ಲಿ ಅವರಿಗೆ ಬಸವಕಲ್ಯಾಣ ಪ್ರವೇಶಕ್ಕೆ ಅವಕಾಶ ನೀಡಬಾರದು ಎಂದು ಬುದ್ಧ, ಬಸವ, ಅಂಬೇಡ್ಕರ್ ಯುವ ಸಂಘಟನೆ ಒತ್ತಾಯಿಸಿದೆ.

ಜೂನ್ 28 ರಂದು ಬಸವಕಲ್ಯಾಣದಲ್ಲಿ ನಡೆಯಲಿರುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಕೊಲ್ಲಾಪುರದ ಕಾಡಸಿದ್ದೇಶ್ವರ ಮಠದ ಕನ್ನೇರಿ ಸ್ವಾಮೀಜಿಯವರ ಬಸವಕಲ್ಯಾಣ ಪ್ರವೇಶ ತಡೆಯಬೇಕು ಎಂದು ಸಂಘಟನೆಯ ಅಧ್ಯಕ್ಷ ಮಹೇಶ ಗೋರನಾಳಕ‌ರ್ ಆಗ್ರಹಿಸಿದ್ದಾರೆ.

ಬಸವ ಭಕ್ತರನ್ನು ಬಸವ ತಾಲಿಬಾನಿ ಎಂದು ಉಲ್ಲೇಖಿಸಿರುವುದು ಹಾಗೂ ಬಸವ ತತ್ವ ಮತ್ತು ಸಂಸ್ಕೃತಿಯ ಪ್ರಚಾರದಲ್ಲಿ ತೊಡಗಿರುವ ಪೂಜ್ಯರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಖಂಡನೀಯ ಎಂದಿದ್ದಾರೆ.

ಸರಕಾರ ಮತ್ತು ಜಿಲ್ಲಾಡಳಿತವು ಬಸವ ಭಕ್ತರ ಭಾವನೆಗಳು ಹಾಗೂ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಸೂಕ್ತ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಬೇಕು. ಸಾರ್ವಜನಿಕ ಶಾಂತಿ, ಸೌಹಾರ್ದತೆ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇಲ್ಲವಾದಲ್ಲಿ ತಮ್ಮ ಸಂಘಟನೆಯ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಹೇಶ ಎಚ್ಚರಿಕೆ ನೀಡಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/HyjxiPYAeioCDGVqP9ADsE

Share This Article
Leave a comment

Leave a Reply

Your email address will not be published. Required fields are marked *