ನುಡಿನಮನ: ಸಾವಿರಾರು ಜನರಿಗೆ ಸಂಸ್ಕಾರ, ಶಿಕ್ಷಣ ನೀಡಿದ ಮುಮ್ಮಡಿ ನಿರ್ವಾಣ ಸ್ವಾಮೀಜಿ

ಬಸವ ಮೀಡಿಯಾ
ಬಸವ ಮೀಡಿಯಾ

ಚನ್ನಪಟ್ಟಣ:

ಲಿಂಗೈಕ್ಯ ಶ್ರೀ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳವರು ಸಮಾಜ, ಶಿಕ್ಷಣ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಸಲ್ಲಿಸಿದ ಸೇವೆ ಅಮೋಘವಾದದ್ದು ಎಂದು ಟ್ರಸ್ಟ್ ಅಧ್ಯಕ್ಷ ಬಿ. ಬಸಪ್ಪ ಅವರು ಹೇಳಿದರು.

ಇಲ್ಲಿನ ಶ್ರೀ ಬಸವೇಶ್ವರ ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ ಕನಕಪುರದ ಶ್ರೀ ದೇಗುಲ ಮಠದ ಲಿಂಗೈಕ್ಯ ಶ್ರೀಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿಗಳ ನುಡಿನಮನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಮೊದಲಿಗೆ ಭಾಗವಹಿಸಿದ್ದ ಗಣ್ಯರು ಶ್ರೀಗಳವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ನಮನ ಸಲ್ಲಿಸಿದರು.

ವೀರಶೈವ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಬಿ.ಎಸ್. ಶಿವಶಂಕರ ಮಾತನಾಡಿ, ಶ್ರೀಗಳು ಐದು ವರ್ಷಗಳ ಕಾಲ ಶ್ರೀ ದೇಗುಲ ಮಠದ ಪೀಠಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಅನ್ನದಾಸೋಹ, ಅಕ್ಷರದಾಸೋಹ ಸೇರಿದಂತೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಉಚಿತವಾಗಿ ನಡೆಸುವ ಮೂಲಕ ಸಾವಿರಾರು ಜನರಿಗೆ ಸಂಸ್ಕಾರ, ಶಿಕ್ಷಣ ನೀಡಿದ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಸ್ಮರಣೆ

ಗುರುಶ್ರೀ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಗುರುಮಾದಯ್ಯ ಮಾತನಾಡಿ, ಶ್ರೀಗಳು ದೀನ-ದಲಿತರು ಹಾಗೂ ಬಡವರನ್ನು ಸಮಾನ ದೃಷ್ಟಿಯಿಂದ ಕಾಣುತ್ತಿದ್ದರು. ವಯೋಸಹಜ ಅನಾರೋಗ್ಯದಿಂದ 84ನೇ ವಯಸ್ಸಿನಲ್ಲಿ ಶಿವೈಕ್ಯರಾದ ಅವರ ಆದರ್ಶಗಳು ಸದಾ ಸ್ಮರಣೀಯವಾಗಿವೆ ಎಂದು ಹೇಳಿದರು.

ಇತಿಹಾಸ ಉಪನ್ಯಾಸಕಿ ಶ್ರೀಮತಿ ಇಂದ್ರಮ್ಮ, ವೀರಶೈವ ಮುಖಂಡ ಗಂಗಾಧರಪ್ಪ ಅವರು ಶ್ರೀಗಳವರ ಸೇವೆ ಮತ್ತು ವ್ಯಕ್ತಿತ್ವವನ್ನು ಕೊಂಡಾಡಿ ನುಡಿನಮನ ಸಲ್ಲಿಸಿದರು.

ಬೇವೂರು ಮಲ್ಲಿಕಾರ್ಜುನಸ್ವಾಮಿ ಮಠದ ಅಧ್ಯಕ್ಷ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಚನ್ನಪಟ್ಟಣ ವಿರಕ್ತಮಠದ ಅಧ್ಯಕ್ಷ ಶಿರುದ್ರಸ್ವಾಮೀಜಿ ಅವರು ಶ್ರೀ ದೇಗುಲಮಠದ ಶ್ರೀಗಳವರೊಂದಿಗಿನ ತಮ್ಮ ಆತ್ಮೀಯ ಒಡನಾಟವನ್ನು ಸ್ಮರಿಸಿ ಭಾವುಕರಾದರು.

ಕಾರ್ಯಕ್ರಮದಲ್ಲಿ ಟ್ರಸ್ಟ್ ಕಾರ್ಯದರ್ಶಿ ಉಮಾಶಂಕರ, ಕೋಶಾಧಿಕಾರಿಗಳಾದ ಬಸವರಾಜು ಜಿ., ವೀರಶೈವ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯದರ್ಶಿ ಎಸ್.ಬಿ. ಮಹೇಶ, ಅಖಿಲ ಭಾರತ ವೀರಶೈವ ಮಹಾಸಭಾ ಚನ್ನಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಬಿ.ಎಸ್. ಸಿದ್ಧಮಾದಯ್ಯ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ವಿಶ್ವೇಶ್ವರಯ್ಯ ಐಟಿಐ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀಗಳಿಗೆ ಗೌರವ ನಮನ ಸಲ್ಲಿಸಿದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/IuAONC0TfmA8PyaqHT9WIP

Share This Article
Leave a comment

Leave a Reply

Your email address will not be published. Required fields are marked *