ಬೆಂಗಳೂರು :
ರಾಜ್ಯ, ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ ಎಂಬ ಸಂಘಟನೆ ರಚಿಸಲು ನಿರ್ಧರಿಸಲಾಗಿದೆ ಎಂದು ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಂಗಳವಾರ ಹೇಳಿದರು.
ಶಾಸಕರ ಭವನದಲ್ಲಿ ನಡೆದ ಲಿಂಗಾಯತ ಪಂಚಮಸಾಲಿ ವಕೀಲರ ಸಂಘದ ಸಭೆಯಲ್ಲಿ ಅವರು ಮೀಸಲಾತಿಗಾಗಿ ಕಾನೂನಾತ್ಮಕವಾಗಿ ಹೋರಾಡಲು ವಕೀಲರನ್ನು ಸಂಘಟಿಸಲಾಗುತ್ತಿದೆ ಎಂದರು.
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಹಾಗೂ ಎಲ್ಲ ಲಿಂಗಾಯತ ಒಳ ಪಂಗಡಗಳಿಗೆ ಒಬಿಸಿ ಮೀಸಲಾತಿ ನೀಡುವಂತೆ ಶಿಫಾರಸು ಮಾಡಬೇಕು ಆಗ್ರಹಿಸಿದರು. ಇದಕ್ಕೆ ಸರಕಾರ ಶೀಘ್ರವೇ ಕಾನೂನು ತಜ್ಞರ ಸಭೆ ಕರೆದು ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.
ಕಾನೂನು ಅಡೆತಡೆಗಳನ್ನು ನಿವಾರಿಸಲು ಸರಕಾರ ನಿರ್ಲಕ್ಷ್ಯ ಮಾಡಿದಲ್ಲಿ ಬೆಳಗಾವಿ ಸುವರ್ಣಸೌಧದ ಅಧಿವೇಶನದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು. ನಂತರ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಲಿಂಗಾಯತ ಪಂಚಮಸಾಲಿ ವಕೀಲರ ತಂಡ ರಾಜ್ಯಪಾಲ ತಾವರಚಂದ ಗೇಹ್ಲೂಟ ರನ್ನು ರಾಜಭವನದಲ್ಲಿ, ಬೇಟಿಯಾಗಿ 2ಎ ಮೀಸಲಾತಿಯ ಹಕ್ಕೋತ್ತಾಯ ಪತ್ರವನ್ನು ನೀಡಲಾಯಿತು