ಗದಗ:
ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಅತಿ ಹೆಚ್ಚು ಚಲನಚಿತ್ರ ಗೀತೆಗಳನ್ನು ಹಾಡುವ ಮೂಲಕ ಸಂಗೀತ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ೨೦ಕ್ಕೂ ಹೆಚ್ಚು ಭಾಷೆಗಳಲ್ಲಿ ೪೮,೦೦೦ ಕ್ಕೂ ಹೆಚ್ಚು ಗೀತೆಗಳನ್ನು ಹಾಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ.
ಸಂಗೀತ ಕ್ಷೇತ್ರಕ್ಕೆ ಎಸ್. ಜಾನಕಿ ಅವರ ಕೊಡುಗೆ ಅಪಾರವಾದುದು. ಈ ನಾಡಿನ ಜನಮನದಲ್ಲಿ ಚಿರಸ್ಥಾಯಿಯಾಗಿರುವ ಅವರ ಈ ಮಹತ್ತರ ಸಾಧನೆಗೆ ಅನೇಕ ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ. ಖ್ಯಾತ ಗಾಯಕಿಯ ಅಗಲುವಿಕೆಯಿಂದ ನಿಜಕ್ಕೂ ಸಂಗೀತ ಲೋಕಕ್ಕೆ ತುಂಬಲಾರದ ಹಾನಿಯುಂಟಾಗಿದೆ.
ಬಸವಾದಿ ಶಿವಶರಣರು ಅಗಲಿದ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ಮತ್ತು ಅಪಾರ ಅಭಿಮಾನಿ ಬಳಗಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಕಟಣೆ ಮೂಲಕ ಡಂಬಳ-ಗದಗ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ಪೀಠಾಧಿಪತಿಗಳಾದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಬಸವಾದಿ ಶರಣರಲ್ಲಿ ಪ್ರಾರ್ಥಿಸಿದ್ದಾರೆ.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/IuAONC0TfmA8PyaqHT9WIP
