ಶ್ರಾವಣಮಾಸದ ಪ್ರಯುಕ್ತ ಮುರುಘಾಮಠದಲ್ಲಿ ವಚನಾಭಿಷೇಕ

ಬಸವ ಮೀಡಿಯಾ
ಬಸವ ಮೀಡಿಯಾ

ಚಿತ್ರದುರ್ಗ:

ಇಲ್ಲಿನ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಮೂಲಕರ್ತೃ ಮುರಿಗೆ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾವಿಶ್ರಾಂತಿ ಸನ್ನಿಧಾನದಲ್ಲಿಂದು ಶ್ರಾವಣಮಾಸದ ಪ್ರಯುಕ್ತ ವಚನಾಭಿಷೇಕ ಇನ್ನಿತರ ಪೂಜಾ ಕೈಂಕರ್ಯಗಳು ನೆರವೇರಿದವು.

ನಂತರ ಮುರುಘಾ ಪರಂಪರೆಯ ಹತ್ತನೆಯ ಪೀಠಾಧಿಪತಿಗಳಾದ ಶ್ರೀ ನೈಘಂಟಿನ ಸಿದ್ಧಬಸವ ಸ್ವಾಮಿಗಳವರ ಸ್ಮರಣೆ ಮಾಡಿ ನಂತರ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಗೌರವ ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮೀಜಿ, ಬಸವ ಮುರುಘೇಂದ್ರ ಸ್ವಾಮೀಜಿ, ಗುರುಮಠಕಲ್‌ನ ಶಾಂತವೀರ ಗುರು ಮುರುಘರಾಜೇಂದ್ರ ಸ್ವಾಮಿಗಳು, ಬಸವ ಮೀಡಿಯಾ ಟ್ರಸ್ಟ್ ಚೇರ್ಮನ್ ಟಿ.ಆರ್. ಚಂದ್ರಶೇಖರ, ಸೋಮಶೇಖರಪ್ಪ, ಅರುಣ ಎಂ.ಎ., ಬಸವರಾಜ ಕಟ್ಟಿ ಮೊದಲಾದವರು ಭಾಗವಹಿಸಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/JtGWW38lyFrDf4kKL0aXGH

Share This Article
Leave a comment

Leave a Reply

Your email address will not be published. Required fields are marked *