ಶ್ರಾವಣ; ಮುರುಘಾಮಠದಲ್ಲಿ ವಚನಾಭಿಷೇಕ
ಚಿತ್ರದುರ್ಗ:
ಇಲ್ಲಿನ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಮೂಲಕರ್ತೃ ಮುರಿಗೆ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾವಿಶ್ರಾಂತಿ ಸನ್ನಿಧಾನದಲ್ಲಿಂದು ಮಂಗಳವಾರ ಶ್ರಾವಣ ಮಾಸದ ಪ್ರಯುಕ್ತ ವಚನಾಭಿಷೇಕ ಇನ್ನಿತರ ಪೂಜಾ ಕೈಂಕರ್ಯಗಳು ನೆರವೇರಿದವು.
ನಂತರ ಮುರುಘಾ ಪರಂಪರೆಯ ೧೪ನೇ ಪೀಠಾಧಿಪತಿಗಳಾದ ಶ್ರೀ ಶಿರಸಂಗಿ ಮಹಾಲಿಂಗ ಸ್ವಾಮಿಗಳವರ ಸ್ಮರಣೆ ಮಾಡಿ ನಂತರ ಗುರುಗಳ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಗೌರವ ಸಮರ್ಪಿಸಲಾಯಿತು.
ಈ ಸಂದರ್ಭದಲ್ಲಿ ದಾವಣಗೆರೆ ವಿರಕ್ತಮಠದ ಡಾ. ಬಸವಪ್ರಭು ಸ್ವಾಮೀಜಿ, ಶ್ರೀ ಬಸವ ಮುರುಘೇಂದ್ರ ಸ್ವಾಮಿಗಳು, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ಭಕ್ತಾದಿಗಳು ಇದ್ದರು.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/JtGWW38lyFrDf4kKL0aXGH
