ಬಸವಕಲ್ಯಾಣ:
‘ಶಾಂತಿ, ಸೌಹಾರ್ದಯುತ ಉತ್ತಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಸಾರಿದ ತತ್ವ ದಾರಿದೀಪವಾಗಿದೆ’ ಎಂದು ಕೂಡಲಸಂಗಮ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಹೇಳಿದರು.
ನಗರದಲ್ಲಿ ಅಂತರರಾಷ್ಟ್ರೀಯ ಲಿಂಗಾಯತ ಧರ್ಮ ಕೇಂದ್ರ ಮತ್ತು ಲಿಂಗವಂತ ಶರಣ ಹರಳಯ್ಯ ಪೀಠದಿಂದ ಭಾನುವಾರ ನಡೆದ ಶರಣು ಶರಣಾರ್ಥಿ ಸಮಾವೇಶ ಮತ್ತು ಶರಣ ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮನವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹರಳಯ್ಯ ಪೀಠಾಧ್ಯಕ್ಷೆ ಅಕ್ಕ ಗಂಗಾಂಬಿಕಾ ಮಾತನಾಡಿ, ಅಪ್ಪಣ್ಣನವರ ಧರ್ಮಪತ್ನಿ ಲಿಂಗಮ್ಮನವರು ಮಹಾ ಯೋಗಿಣಿ ಆಗಿದ್ದರು. ಇವರು ಬರೆದ 114 ವಚನಗಳು ಲಭ್ಯವಾಗಿವೆ’ ಎಂದರು, ಎಂದು ಪ್ರಜಾವಾಣಿ ವರದಿ ಮಾಡಿದೆ.