ಚಿತ್ರದುರ್ಗ :
ದಿನಾಂಕ 29.07.2024 ರಂದು ಜಾಗತಿಕ ಲಿಂಗಾಯತ ಮಹಾಸಭಾ ಚಿತ್ರದುರ್ಗ ಜಿಲ್ಲಾ ಘಟಕದ ಪ್ರಾರಂಭೋತ್ಸವ ಹಾಗೂ ಸೇವಾ ದೀಕ್ಷಾ ಸಮಾರಂಭ ನೆರವೇರಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯಶ್ರೀ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸಾನೇಹಳ್ಳಿ ಹಾಗು ಪೂಜ್ಯಶ್ರೀ ಡಾ. ಜಯಬಸವ ಕುಮಾರಸ್ವಾಮಿಗಳು ಬ್ರಹನ್ಮಠ ಚಿತ್ರದುರ್ಗ ಆಡಳಿತ ಮಂಡಳಿಯ ಸದಸ್ಯರು, ಇವರು ವಹಿಸಿದ್ದರು.
ಬಸವ ಮಂಟಪದ ಪೂಜ್ಯ ಮಾತಾ ದಾನೇಶ್ವರಿ ತಾಯಿ ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಜಾಗತಿಕ ಲಿಂಗಾಯತ ಮಹಾಸಭಾ ಬೆಳಗಾವಿ ಜಿಲ್ಲಾಧ್ಯಕ್ಷ ಶ್ರೀ ಬಸವರಾಜ್ ರೊಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಧಾರವಾಡ ಜಿಲ್ಲಾಧ್ಯಕ್ಷ ಶ್ರೀ ಎಂ ವಿ ಗೊಂಗಡಶೆಟ್ಟಿ ಅವರು ಸೇವಾ ದೀಕ್ಷಾ ಪ್ರತಿಜ್ಞೆಯನ್ನು ನೆರವೇರಿಸಿದರು.
ಮೈಸೂರು ಜಿಲ್ಲಾಧ್ಯಕ್ಷ ಶ್ರೀ ಮಹದೇವಪ್ಪ ಅವರು ಪದಾಧಿಕಾರಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು. ಸಮಾರಂಭದಲ್ಲಿ ಚಿತ್ರದುರ್ಗದ ಜಿಲ್ಲಾಧ್ಯಕ್ಷರಾಗಿ ಶ್ರೀ ಕೆಂಚವೀರಪ್ಪನವರು ಆಯ್ಕೆಯಾದರು. ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಮಹಿಳಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಶೈಲಜ ಬಾಬು ಹಾಗೂ ಜಿಲ್ಲೆಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೊಪ್ಪಳ, ದಾವಣಗೆರೆ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು