ಸಾಣೇಹಳ್ಳಿ :
ಪೂಜ್ಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರು 75 ವರ್ಷಗಳನ್ನು ಪೂರೈಸಿ 76ನೆ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸುಸಂದರ್ಭದಲ್ಲಿ, ಚನ್ನಗಿರಿ ತಾಲ್ಲೂಕಿನ ಆಯ್ದ ಭಕ್ತಾದಿಗಳ ಬಳಗವು ಶ್ರೀಮಠಕ್ಕೆ ಆಗಮಿಸಿ ಪೂಜ್ಯ ಶ್ರೀಗಳಿಗೆ ಭಕ್ತಿಪೂರ್ವಕ ಗುರುಕಾಣಿಕೆ ಸಲ್ಲಿಸಿ ಆಶೀರ್ವಾದ ಪಡೆದರು.
ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಕೇವಲ ಧಾರ್ಮಿಕ ಕ್ಷೇತ್ರಕ್ಕಷ್ಟೇ ಸೀಮಿತವಾಗದೆ ಸಾಮಾಜಿಕ, ಸಾಹಿತ್ಯಿಕ, ಸಾಂಸ್ಕೃತಿಕ ಹಾಗೂ ರಂಗಭೂಮಿ ಕ್ಷೇತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದಾರೆ. ಸಮಾಜದಲ್ಲಿದ್ದ ಮೌಢ್ಯ, ಕಂದಾಚಾರ ಮತ್ತು ಅಂಧಶ್ರದ್ಧೆಗಳ ವಿರುದ್ಧ ತಮ್ಮ ವಚನ ಶೋಧ, ನಾಟಕಗಳು ಹಾಗೂ ವಿಚಾರಪೂರ್ಣ ಲೇಖನಗಳ ಮೂಲಕ ಬೃಹತ್ ವೈಚಾರಿಕ ಕ್ರಾಂತಿಯನ್ನೇ ಹುಟ್ಟುಹಾಕಿದ್ದಾರೆ.
ಪೂಜ್ಯರ ಈ ಅಮೂಲ್ಯವಾದ ಸಮಾಜಮುಖಿ ಸೇವೆಯನ್ನು ಸ್ಮರಿಸಿ, ಅವರ 76ನೇ ವರ್ಷದ ಪಾದಾರ್ಪಣೆಯ ಸಂಭ್ರಮದ ಅಂಗವಾಗಿ ಚನ್ನಗಿರಿ ತಾಲ್ಲೂಕಿನ ಭಕ್ತಾದಿಗಳು ಶ್ರೀಮಠಕ್ಕೆ 75,000 (ಎಪ್ಪತ್ತೈದು ಸಾವಿರ) ರೂಪಾಯಿಗಳ ಕಾಣಿಕೆಯನ್ನು ಸಮರ್ಪಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಹೆಚ್. ಎಸ್. ಮಲ್ಲಿಕಾರ್ಜುನಪ್ಪ, ಮಲ್ಲೇಶಪ್ಪ, ರಾಜಪ್ಪ, ಶಿವಲಿಂಗಪ್ಪ ಸೇರಿದಂತೆ ಚನ್ನಗಿರಿ ತಾಲ್ಲೂಕಿನ ಹಲವು ಶ್ರದ್ಧಾವಂತ ಭಕ್ತಾದಿಗಳು ಉಪಸ್ಥಿತರಿದ್ದರು.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Bum3N1nvJ1T3EV8phOUece
