‘ಜೆಎಸ್ಎಸ್ ಸ್ಥಾಪಿಸಿ ಗ್ರಾಮೀಣ ಮಕ್ಕಳಿಗೆ ಶಿಕ್ಷಣ ನೀಡಿದ ರಾಜೇಂದ್ರ ಸ್ವಾಮೀಜಿ’

ಪೂಜ್ಯ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವ

ಯಳಂದೂರು

ತಾಲೂಕಿನ ಬಸವಪರ ಸಂಘಟನೆಗಳು ಪೂಜ್ಯ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 111ನೇ ಜಯಂತಿ ಮಹೋತ್ಸವವನ್ನು ಇತೀಚೆಗೆ ಆಚರಿಸಿದವು.

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಹಾಗೂ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ಪಟ್ಟಣದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಜರುಗಿತು.

ಇದೇ ಸಂದರ್ಭದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಸರ್ವ ಸದಸ್ಯರ ಪರಿಚಯಾತ್ಮಕ ಸಭೆ ಹಾಗೂ ಶರಣೆ ರತ್ನಮ್ಮ ಮತ್ತು ಶರಣ ಸಿದ್ದಮಲ್ಲದೇವರ, ಗೌಡಳ್ಳಿ ತಾಲೂಕು ಬೋರ್ಡ್ ಸದಸ್ಯರ ದತ್ತಿ ಕಾರ್ಯಕ್ರಮವೂ ನಡೆಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಗರಕಲ್ಲು ಮಠದ ಅಧ್ಯಕ್ಷರಾದ ಪೂಜ್ಯ ಸಿದ್ದಮಲ್ಲ ಸ್ವಾಮಿಗಳು ವಹಿಸಿದ್ದರು.

ಮುಡುಕನಪುರ ಮಠದ ಪೂಜ್ಯ ಷಡಕ್ಷರ ದೇಶಿಕೇಂದ್ರ ಮಹಾಸ್ವಾಮಿಗಳು ನುಡಿನಮನ ಸಲ್ಲಿಸಿ, ರಾಜೇಂದ್ರ ಶ್ರೀಗಳು ಶಿಕ್ಷಣ ಪ್ರೇಮಿಗಳಾಗಿದ್ದು, ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಣವೇ ಪ್ರಮುಖ ಸಾಧನವೆಂದು ನಂಬಿದ್ದರು. ಜೆಎಸ್ಎಸ್ ಮಹಾವಿದ್ಯಾಪೀಠ ಸ್ಥಾಪಿಸುವ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೆ, ವಿಶೇಷವಾಗಿ ಹೆಣ್ಣುಮಕ್ಕಳಿಗೆ ಶಿಕ್ಷಣ ದೊರೆಯುವಂತೆ ಮಾಡಿದರು. ಶಿಕ್ಷಣದ ಜೊತೆಗೆ ಆರೋಗ್ಯ, ಸಾಹಿತ್ಯ ಮತ್ತು ಸಂಗೀತ ಕ್ಷೇತ್ರಗಳ ಅಭಿವೃದ್ಧಿಗೂ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಿ.ಕೆ. ರವಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅಖಿಲ ಭಾರತ ವೀರಶೈವ ಮಹಾಸಭಾದ ಕೇಂದ್ರ ಸಮಿತಿ ಸದಸ್ಯರು ಹಾಗೂ ಚಾಮರಾಜನಗರ ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷರಾದ ಎನ್‌ರಿಚ್ ಹೆಚ್.ಎಸ್. ಮಹದೇವಸ್ವಾಮಿ ಮಾತನಾಡಿ, ಶರಣ ಸಾಹಿತ್ಯ ಪರಿಷತ್ತು ಕೇವಲ ಸಾಹಿತ್ಯ ಸಂಘಟನೆಯಾಗಿರದೆ, ಶರಣರ ಸಮಾನತೆ, ಕಾಯಕ, ದಾಸೋಹ ಮತ್ತು ಮಾನವೀಯ ಮೌಲ್ಯಗಳನ್ನು ಸಮಾಜದಲ್ಲಿ ಬಿತ್ತುವ ಸಾಮಾಜಿಕ ಸಂಘಟನೆಯಾಗಿ ರೂಪುಗೊಂಡಿದೆ.

ಈ ಆಶಯಗಳಿಗೆ ಪೂರಕವಾಗಿ ಯಳಂದೂರು ತಾಲೂಕು ಘಟಕ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ. ಶರಣರ ವಿಚಾರಧಾರೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಎಲ್ಲ ಸದಸ್ಯರೂ ಸಂಘಟಿತವಾಗಿ ಕಾರ್ಯನಿರ್ವಹಿಸಬೇಕು ಎಂದರು.

ಅಧ್ಯಕ್ಷತೆಯನ್ನು ಯಳಂದೂರು ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಗೌಡಳ್ಳಿ ಶಿವಕುಮಾರ ಸ್ವಾಮಿಗಳು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಯಳಂದೂರು ತಾಲೂಕು ಘಟಕದ ಅಧ್ಯಕ್ಷರಾದ ಜಿ.ಎಂ. ಮಾದೇವಪ್ಪ, ಕದಳಿ ಮಹಿಳಾ ವೇದಿಕೆಯ ಅಧ್ಯಕ್ಷರಾದ ಶ್ರೀಮತಿ ಲಲಿತಾ ದೊರೆಸ್ವಾಮಿ ಗೌಡಳ್ಳಿ, ಜೆಎಸ್ಎಸ್ ಮಹಿಳಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಚಂದ್ರಶೇಖರ್ ಹೆಚ್.ಎಸ್., ಪಾಲಿಟೆಕ್ನಿಕ್ ಪ್ರೌಢಶಾಲೆಯ ಶಿಕ್ಷಕರಾದ ಚಂದ್ರಕಲಾ ಸೇರಿದಂತೆ ಕೊಳ್ಳೇಗಾಲ, ಯಳಂದೂರು ಹಾಗೂ ಸಂತೇಮರಹಳ್ಳಿ ಭಾಗದ ಗಣ್ಯರು, ಶರಣ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಯಳಂದೂರು ಜೆಎಸ್ಎಸ್ ಶಾಲೆಯ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿಗಳಾದ ಕು ಎಂ ಪಲ್ಲವಿ ಹಾಗೂ ಕು ಜೆ ಸುನೀತಾ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Bum3N1nvJ1T3EV8phOUece

Share This Article
Leave a comment

Leave a Reply

Your email address will not be published. Required fields are marked *

ವೀರಶೈವ ಮಹಾಸಭಾ ಬೆಂಗಳೂರು, ಬಸವ ಕೇಂದ್ರ ಚಾಮರಾಜನಗರ, ಬಸವ ಸಂಸ್ಕೃತಿ ಅಭಿಯಾನ ಸಮಿತಿ, ಚಾಮರಾಜನಗರ