ಅನುಭವ ಮಂಟಪ ಉತ್ಸವ: ಹಂಸಲೇಖ ಸೇರಿ ನಾಲ್ವರಿಗೆ ಪ್ರಶಸ್ತಿ

ಬಸವ ಮೀಡಿಯಾ
ಬಸವ ಮೀಡಿಯಾ

ಬಸವಕಲ್ಯಾಣ

ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿ ವತಿಯಿಂದ ನಗರದಲ್ಲಿ ನವೆಂಬರ್ 28 ಮತ್ತು 29ರಂದು ಆಯೋಜಿಸಿರುವ ಅನುಭವ ಮಂಟಪ ಉತ್ಸವದಲ್ಲಿ ವಿವಿಧ ಕ್ಷೇತ್ರದ ನಾಲ್ವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಡಳಿ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಚಲನಚಿತ್ರ ಸಂಗೀತ ನಿರ್ದೇಶಕ ಹಂಸಲೇಖ ಅವರಿಗೆ `ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿ’ ನೀಡಲಾಗುತ್ತಿದೆ. ಪ್ರಶಸ್ತಿಯು ₹1 ಲಕ್ಷ ನಗದು ಮತ್ತು ಫಲಕ ಒಳಗೊಂಡಿದೆ.

ಬಸವತತ್ವ ಪ್ರಚಾರಕ ಶಿವಮೊಗ್ಗದ ನವಲಿಂಗ ಶರಣರು ಇವರಿಗೆ `ಬಸವ ಭಾಸ್ಕರ ರಾಷ್ಟ್ರೀಯ ಪ್ರಶಸ್ತಿ’ ನೀಡಲು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿರುತ್ತದೆ.

ಮನೋರೋಗ ತಜ್ಞ ಡಾ.ಸಿ.ಆರ್.ಚಂದ್ರಶೇಖರ ಅವರಿಗೆ `ಅನುಭವ ಮಂಟಪ ರಾಷ್ಟ್ರೀಯ ಪ್ರಶಸ್ತಿ’ ನೀಡಲಾಗುತ್ತಿದ್ದು ಪ್ರಶಸ್ತಿಯು ₹1 ಲಕ್ಷ ನಗದು ಹಣ ಹಾಗೂ ಫಲಕ ಒಳಗೊಂಡಿರುತ್ತದೆ.

ಸಾಹಿತಿ ಸಂತೋಷ ಹಾನಗಲ್ ಅವರಿಗೆ `ಡಾ.ಎಂ.ಎಂ.ಕಲಬುರ್ಗಿ ಸಾಹಿತ್ಯ, ಸಂಶೋಧನಾ ರಾಷ್ಟ್ರೀಯ ಪ್ರಶಸ್ತಿ’ ನೀಡಲು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 50 ಸಾವಿರ ನಗದು ಹಣ ಮತ್ತು ಫಲಕ ಒಳಗೊಂಡಿರುತ್ತದೆ. ಅನುಭವ ಮಂಟಪ ಉತ್ಸವದಲ್ಲಿ ಈ ನಾಲ್ವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/HhJYSZVofEgD6VIx5ufPBU

Share This Article
Leave a comment

Leave a Reply

Your email address will not be published. Required fields are marked *