ಧಾರವಾಡ :
ಧಾರವಾಡ ಜಿಲ್ಲಾ 19 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ. ವೀರಣ್ಣ ರಾಜೂರ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಡಾ. ವೀರಣ್ಣ ರಾಜೂರ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ. ಲಿಂಗರಾಜ ಅಂಗಡಿ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಡಾ. ವೀರಣ್ಣ ರಾಜೂರ ಅವರನ್ನು ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.
ಡಾ. ವೀರಣ್ಣ ರಾಜೂರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕರ್ನಾಟಕ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಮುಖ್ಯಸ್ಥರಾಗಿ, ಸಧ್ಯ ಡಾ. ಎಂ. ಎಂ. ಕಲ್ಬುರ್ಗಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಡಾ. ಲಿಂಗರಾಜ ಅಂಗಡಿ ತಿಳಿಸಿದ್ದಾರೆ.
ಜಿಲ್ಲಾ 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ 18 ಮತ್ತು 19 ನವೆಂಬರದಂದು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಭಾಭವನ, ಧಾರವಾಡದಲ್ಲಿ ನಡೆಯಲಿದೆ.
ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/HhJYSZVofEgD6VIx5ufPBU
