ಬೀದರ್ ಸಭೆಯಲ್ಲಿ ರವಿ ಹಂಜ್ ಹೇಳಿಕೆಗೆ ತೀವ್ರ ಖಂಡನೆ, ಹೋರಾಟಕ್ಕೆ ನಿರ್ಣಯ

ಬಸವ ಮೀಡಿಯಾ
ಬಸವ ಮೀಡಿಯಾ

ಬೀದರ :

ಮಂಗಳವಾರ ಸಂಜೆ ನಗರದ ಗಾಂಧಿಗಂಜನ ಬಸವೇಶ್ವರ ದೇವಸ್ಥಾನದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಬೀದರ ಜಿಲ್ಲಾ ಘಟಕದ ವತಿಯಿಂದ ಮಹತ್ವದ ಸಭೆ ನಡೆಯಿತು.

ಗುಣತೀರ್ಥವಾಡಿಯ ಪೂಜ್ಯ ಬಸವಪ್ರಭು ಸ್ವಾಮಿಗಳವರ ಸಾನಿಧ್ಯದಲ್ಲಿ, ಜಾಗತಿಕ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರು ಹಾಗೂ ಬೀದರ ಜಿಲ್ಲಾಧ್ಯಕ್ಷರಾದ ಬಸವರಾಜ ಧನ್ನೂರ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

ಇತ್ತೀಚೆಗೆ ಸ್ವಯಂಘೋಷಿತ ಲೇಖಕ ರವಿ ಹಂಜ್ ಅವರು ಸಂದರ್ಶನವೊಂದರಲ್ಲಿ ಜಗಜ್ಯೋತಿ ಬಸವಣ್ಣನವರ ವ್ಯಕ್ತಿತ್ವ ಹಾಗೂ ಶರಣರ ವಚನಗಳ ಕುರಿತು ನೀಡಿರುವ ಆಕ್ಷೇಪಾರ್ಹ ಹೇಳಿಕೆಗಳನ್ನು ಸಭೆಯು ತೀವ್ರವಾಗಿ ಖಂಡಿಸಿತು.

ಸಭೆಯಲ್ಲಿ ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷರಾದ ಬಸವರಾಜ ಬುಳ್ಳಾ, ಮಹಿಳಾ ಘಟಕದ ಅಧ್ಯಕ್ಷೆ ಉಷಾ ಮಿರ್ಚೆ, ಪ್ರಧಾನ ಕಾರ್ಯದರ್ಶಿ ಜಯದೇವಿ ಯದಲಾಪುರೆ, ಜಾಗತಿಕ ಲಿಂಗಾಯತ ಮಹಾಸಭಾದ ಬೀದರ ಜಿಲ್ಲಾ ಘಟಕದ ಹಿರಿಯ ಉಪಾಧ್ಯಕ್ಷರಾದ ಸಿದ್ದಯ್ಯ ಕೌಡಿಮಠ, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಜೋನ್ನಿಕೆರಿ, ಮಾತೆ ಮಹಾದೇವಿ ಬಳಗದ ಸಿದ್ದು ಶಟಕಾರ, ರಾಷ್ಟ್ರೀಯ ಬಸವ ದಳದ ರಾಜ್ಯ ಸಂಘಟನಾ ಕಾರ್ಯದರ್ಶಿ ರವಿ ಪಾಪಡೆ, ಯೋಗೆಶ ಶ್ರೀಗಿರಿ ಸೇರಿದಂತೆ ಅನೇಕ ಬಸವ ಭಕ್ತರು ಉಪಸ್ಥಿತರಿದ್ದರು. ಯೋಗೇಂದ್ರ ಯದಲಾಪೂರೆ ಸಭೆಯ ನಿರ್ವಹಣೆ ಮಾಡಿದರು.

ಸಭೆಯಲ್ಲಿ ಸರ್ವಾನುಮತದಿಂದ ಕೈಗೊಂಡ ಪ್ರಮುಖ ನಿರ್ಣಯಗಳು:

  1. ನವೆಂಬರ್ 18ರಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವುದು.
  2. ನವೆಂಬರ್ 19ರಂದು ಬೆಳಿಗ್ಗೆ 10 ಗಂಟೆಗೆ ಬಸವೇಶ್ವರ ವೃತ್ತದಲ್ಲಿ ರವಿ ಹಂಜ್ ನ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸುವುದು.
  3. ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ಸಲ್ಲಿಸಿ ಕಾನೂನು ಕ್ರಮಕ್ಕೆ ಆಗ್ರಹಿಸುವುದು.
  4. ಕರ್ನಾಟಕ ರಾಜ್ಯ ಪ್ರವೇಶ ನಿರ್ಬಂಧ, ಪಾಸ್‌ಪೋರ್ಟ್ ಜಪ್ತಿ ಹಾಗೂ ಸಾಮಾಜಿಕ ಜಾಲತಾಣಗಳ ಮೇಲಿನ ಸೂಕ್ತ ನಿರ್ಬಂಧಗಳ ಕುರಿತು ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸುವುದು.
  5. ಜಿಲ್ಲಾಡಳಿತದ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ಒತ್ತಾಯಿಸುವುದು.

ಬಸವಣ್ಣನವರು ಕೇವಲ ಒಂದು ಸಮುದಾಯದ ನಾಯಕರಲ್ಲ; ಅವರು ಸಮಾನತೆ, ಕಾಯಕ, ದಾಸೋಹ ಮತ್ತು ಮಾನವೀಯತೆಯ ವಿಶ್ವಗುರುಗಳು. ಅವರ ವಿಚಾರಧಾರೆ ಮತ್ತು ಶರಣರ ವಚನ ಪರಂಪರೆಯ ಗೌರವವನ್ನು ಕಾಪಾಡುವುದು ನಮ್ಮೆಲ್ಲರ ಸಾಮೂಹಿಕ ಜವಾಬ್ದಾರಿಯಾಗಿದೆ.

ಬಸವತತ್ವದ ಘನತೆಗಾಗಿ ನಾವೆಲ್ಲರೂ ಒಂದಾಗಿ, ಶಾಂತಿಯುತ ಹಾಗೂ ಕಾನೂನುಬದ್ಧ ಹೋರಾಟಕ್ಕೆ ಸಜ್ಜಾಗೋಣ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/HhJYSZVofEgD6VIx5ufPBU

Share This Article
3 Comments
  • ಒಳ್ಳೆಯ ವಿಚಾರ.ಬಸವ ಸಂಘಟನೆಗಳು ಒಗ್ಗೂಡಿ ತೀವ್ರ ಸ್ವರೂಪದ ಪ್ರತಿಭಟನೆ ಯಶಸ್ವಿಯಾಗಿ ನಡೆಯಲಿ.ಜೈಬಸವ

Leave a Reply

Your email address will not be published. Required fields are marked *