ಹಂಜ್ ಬಂಧಿಸದಿದ್ದರೆ ಉಗ್ರ ಪ್ರತಿಭಟನೆ: ಚಾಮರಾಜನಗರ ಮಠಾಧೀಶರು

ಬಸವ ಮೀಡಿಯಾ
ಬಸವ ಮೀಡಿಯಾ

ಚಾಮರಾಜನಗರ

ವಿಶ್ವಗುರು ಬಸವಣ್ಣ ಹಾಗೂ ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಲೇಖಕ ರವಿ ಹಂಜ್ ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎ೦ದು ಜಿಲ್ಲೆಯ ಪ್ರಮುಖ ಮಠಾಧೀಶರು ಆಗ್ರಹಿಸಿದರು.

ಬಸವಣ್ಣ ಅವರ ವ್ಯಕ್ತಿತ್ವ ಹಾಗೂ ವಚನ ಸಾಹಿತ್ಯದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ, ರವಿ ಹಂಜ್ ಬಂಧಿಸಿ ಕ್ರಮ ಜರುಗಿಸದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಉಗ್ರ ಪ್ರತಿಭಟನೆ ಮಾಡುವುದಾಗಿ ಮರಿಯಾಲ ಮಠದ ಶ್ರೀ ಇಮ್ಮಡಿ ಮುರುಘಾರಾಜೇ೦ದ್ರಸ್ವಾಮೀಜಿ ಗೋಷ್ಟಿಯಲ್ಲಿ ಎಚ್ಚರಿಸಿದರು.

ಈಗಾಗಲೇ ಸರ್ಕಾರ ರವಿ ಹಂಜ್ ಬರೆದಿರುವ ಬಸವ ಮಂಟಪ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಂಡಿರುವುದು ಸ್ವಾಗತಾರ್ಹ ಎಂದರು.

ನಗರದ ಸಿದ್ದಮಲ್ಲೇಶ್ವರ ವಿರಕ್ತಮಠದ ಚೆನ್ನಬಸವಸ್ವಾಮೀಜಿ ಮಾತನಾಡಿ, 12ನೇ ಶತಮಾನದಲ್ಲಿ ಸಮಾನತೆ ಸಾರಿದ ಬಸವಣ್ಣ ಅವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಖಂಡನೀಯ.

ಬಸವಣ್ಣ ಅವರು ಜಾತಿಪದ್ಧತಿ ಸೇರಿದಂತೆ ಮೂಢನಂಬಿಕೆಗಳ ವಿರುದ್ಧ ಹೋರಾಡಿದರು. ಅಲ್ಲದೇ ವಚನ ಸಾಹಿತ್ಯವನ್ನು ಜಗತ್ತಿಗೆ ಕೊಟ್ಟರು. ಮುಂದಿನ ದಿನಗಳಲ್ಲಿ ಮಹಾನ್ ಸಾಧಕರ ಬಗ್ಗೆ ಕೆಟ್ಟದಾಗಿ ಮಾತನಾಡದಂತೆ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಮೂಡುಗೂರು ಮಠದ ಇಮ್ಮಡಿ ಉದ್ದಾನಸ್ವಾಮೀಜಿ, ಕಬ್ಬಳ್ಳಿ ಮಠದ ಗುರುಸಿದ್ದಸ್ವಾಮೀಜಿ ಇದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/LKx5yQpivBVC6opWuKbovh

Share This Article
Leave a comment

Leave a Reply

Your email address will not be published. Required fields are marked *