ತರಳಬಾಳು ಬೃಹನ್ಮಠದ ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಮಠದ ಆಸ್ತಿ ನಿಯಂತ್ರಿಸಲು ಏಕವ್ಯಕ್ತಿ ಡೀಡ್ ಮಾಡಿಕೊಂಡಿದ್ದಾರೆ ಎಂಬ ಆಪಾದನೆ ಭಕ್ತರನ್ನು ಕೆರಳಿಸಿದೆ.
ಶಾಸಕ ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಿರಿಗೆರೆ ತರಳಬಾಳು ಮಠದ ಭಕ್ತರ ಸಭೆ ಶ್ರೀಮಠದ ಏಕವ್ಯಕ್ತಿ ಡೀಡ್ ರದ್ಧುಪಡಿಸಿ, ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಮೂಲ ಬೈಲಾ ಯಥವತ್ತಾಗಿ ಜಾರಿಗೊಳಿಸುವಂತೆ ಒಕ್ಕೊರಲ ನಿರ್ಣಯ ಕೈಗೊಂಡಿದೆ.
ಸಭೆಯಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ ಮಾತನಾಡಿ ಮಠದ ಆಸ್ತಿಯೆಲ್ಲಾ ಸಮಾಜದ ಭಕ್ತರಿಗೆ ಸೇರಿದ್ದು. ಆದರೆ, ಸ್ವಾಮೀಜಿ ಯಾರೊಬ್ಬರ ಗಮನಕ್ಕೂ ಬರದಂತೆ 1990ರಲ್ಲಿ ಏಕವ್ಯಕ್ತಿ ಡೀಡ್ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದರು.
30 ವರ್ಷದ ಹಿಂದೆ ಮಾಡಿಸಿಕೊಂಡ ಏಕವ್ಯಕ್ತಿ ಡೀಡ್ ವಿಚಾರವೂ ಯಾರಿಗೂ ಗೊತ್ತಿರಲಿಲ್ಲ. ಈಗ ಗೊತ್ತಾಗಿ, ವಿಚಾರ ನ್ಯಾಯಾಲಯದ ಮೆಟ್ಟಿಲೇರಿದೆ ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು
ಒಂದು ಮಠದಲ್ಲಿ ಮಾಡಿದ್ದನ್ನು ನೋಡಿ, ಉಳಿದವರು ಅನುಸರಿಸುತ್ತಾರೆ. ಇಂತಹದು ಯಾವುದೇ ಸಮಾಜದಲ್ಲೂ ಆಗಬಾರದು. ಹರಿಹರದ ಪಂಚಮಸಾಲಿ ಮಠದಲ್ಲಿ ಟ್ರಸ್ಟ್ ಮಾಡಿಕೊಂಡು, ಸಮಾಜದ ಮುಖಂಡರೇ ಅದನ್ನು ನಿರ್ವಹಿಸುತ್ತಾರೆ. ಅದೇ ರೀತಿ ಎಲ್ಲರು ಮಾಡಬೇಕು ಎಂದು ಹೇಳಿದರು.